ನವದೆಹಲಿ : ಭಾರತ ಸೋಮವಾರ ರಾಷ್ಟ್ರೀಯ ತಂತ್ರಜ್ಞಾನ ದಿನಾಚರಣೆಯನ್ನು ಆಚರಿಸುತ್ತಿದೆ. ರಾಜಸ್ಥಾನ ಪೋಖ್ರಾನ್ನಲ್ಲಿ ನಡೆದ ಅನ್ವಸ್ತ್ರ ಪರೀಕ್ಷೆಯ ದಿನದ ಸ್ಮರಣಾರ್ಥ ಈ ದಿನವನ್ನು ಆಚರಿಸಲಾಗುತ್ತದೆ.
ಈ ಹಿನ್ನೆಲೆಯಲ್ಲಿ ಇತರರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಯನ್ನು ತರಲು ತಂತ್ರಜ್ಞಾನವನ್ನು ಸದುಪಯೋಗಪಡಿಸಿಕೊಳ್ಳುತ್ತಿರುವ ಎಲ್ಲರಿಗೂ ಪ್ರಧಾನಿ ನರೇಂದ್ರ ಮೋದಿ ವಂದಿಸಿದರು.
“ರಾಷ್ಟ್ರೀಯ ತಂತ್ರಜ್ಞಾನ ದಿನದಂದು, ಇತರರ ಜೀವನದಲ್ಲಿ ಸಕಾರಾತ್ಮಕ ವ್ಯತ್ಯಾಸವನ್ನು ತರಲು ತಂತ್ರಜ್ಞಾನವನ್ನು ಸದುಪಯೋಗಪಡಿಸಿಕೊಳ್ಳುತ್ತಿರುವ ಎಲ್ಲರಿಗೂ ನಮ್ಮ ರಾಷ್ಟ್ರವು ನಮಸ್ಕರಿಸುತ್ತದೆ. 1998 ರಲ್ಲಿ ಈ ದಿನ ನಮ್ಮ ವಿಜ್ಞಾನಿಗಳು ನಡೆಸಿದ ಅಸಾಧಾರಣ ಸಾಧನೆಯನ್ನು ನಾವು ನೆನಪಿಸಿಕೊಳ್ಳುತ್ತೇವೆ. ಇದು ಭಾರತದ ಇತಿಹಾಸದಲ್ಲಿ ಒಂದು ಹೆಗ್ಗುರುತು ಕ್ಷಣವಾಗಿದೆ ”ಎಂದು ರಾಜಸ್ಥಾನದ ಪೋಖ್ರಾನ್ನಲ್ಲಿ ಭಾರತದ ಪರಮಾಣು ಪರೀಕ್ಷೆಯನ್ನು ಉಲ್ಲೇಖಿಸಿ ಪ್ರಧಾನಿ ಮೋದಿ ಟ್ವಿಟರ್ನಲ್ಲಿ ಹೇಳಿದ್ದಾರೆ.
Today, technology is helping many in the efforts to make the world free from COVID-19. I salute all those at the forefront of research and innovation on ways to defeat Coronavirus. May we keep harnessing technology in order to create a healthier and better planet.
— Narendra Modi (@narendramodi) May 11, 2020
The tests in Pokhran in 1998 also showed the difference a strong political leadership can make.
Here is what I had said about Pokhran, India’s scientists and Atal Ji’s remarkable leadership during one of the #MannKiBaat programmes. pic.twitter.com/UuJR1tLtrL
— Narendra Modi (@narendramodi) May 11, 2020
“1998ರಲ್ಲಿ ಪೋಖ್ರಾನ್ನಲ್ಲಿ ನಡೆದ ಪರೀಕ್ಷೆಗಳು ಬಲವಾದ ರಾಜಕೀಯ ನಾಯಕತ್ವವು ಮಾಡಬಹುದಾದ ಕಾರ್ಯ ಏನೆಂಬುದನ್ನು ತೋರಿಸಿದೆ” ಎಂದು ಅವರು ಹೇಳಿದ್ದಾರೆ.
ಅಟಲ್ ಬಿಹಾರಿ ವಾಜಪೇಯಿ ಪ್ರಧಾನ ಮಂತ್ರಿಯಾಗಿದ್ದಾಗ ಪೋಖ್ರಾನ್ನಲ್ಲಿ ಪರಮಾಣು ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸುವ ಮೂಲಕ ಭಾರತವು ಮೇ 11, 1998ರಂದು ಒಂದು ಐತಿಹಾಸಿಕ ಮೈಲಿಗಲ್ಲನ್ನು ಸಾಧಿಸಿತು.
ಭೂಗತ ಪರೀಕ್ಷೆಗಳು ವಿಶ್ವದ ಪರಮಾಣು ವೇದಿಕೆಯಲ್ಲಿ ದೇಶದ ಆಗಮನವನ್ನು ಗುರುತಿಸಿದೆ ಮತ್ತು ಅದರ ಕಾರ್ಯತಂತ್ರದ ಕಾರ್ಯಕ್ರಮದಲ್ಲಿ ಕೆಲವು ಪ್ರಭಾವಶಾಲಿ ಬೆಳವಣಿಗೆಗಳಿಗೆ ಅವಕಾಶ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.