ನವದೆಹಲಿ: ಕೇಂದ್ರವು 6,195 ಕೋಟಿ ರೂಪಾಯಿಗಳನ್ನು 14 ರಾಜ್ಯಗಳಿಗೆ ಬಿಡುಗಡೆ ಮಾಡಿದೆ. ಇದು ಹಂಚಿಕೆಯ ನಂತರದ ಆದಾಯ ಕೊರತೆ ಅನುದಾನದ ಎರಡನೇ ಸಮನಾದ ಮಾಸಿಕ ಕಂತು.
COVID-19 ಬಿಕ್ಕಟ್ಟಿನ ಸಂದರ್ಭದಲ್ಲಿ ಈ ಮೊತ್ತವು ರಾಜ್ಯಗಳಿಗೆ ಹೆಚ್ಚುವರಿ ಸಂಪನ್ಮೂಲಗಳನ್ನು ಒದಗಿಸುತ್ತದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.
The government on May 11, 2020 released Rs 6,195.08 crore to 14 states as the second equated monthly installment of the Post Devolution Revenue Deficit Grant as recommended by the 15th Finance Commission. This would provide them additional resources during the Corona crisis. pic.twitter.com/9W9kUorB62
— NSitharamanOffice (@nsitharamanoffc) May 11, 2020
ಈ ಅನುದಾನವನ್ನು 15 ನೇ ಹಣಕಾಸು ಆಯೋಗ ಶಿಫಾರಸು ಮಾಡಿದೆ. ಈ ಅನುದಾನವನ್ನು ಆಂಧ್ರಪ್ರದೇಶ, ಅಸ್ಸಾಂ, ಹಿಮಾಚಲ ಪ್ರದೇಶ, ಕೇರಳ, ಪಂಜಾಬ್, ತಮಿಳುನಾಡು, ಉತ್ತರಾಖಂಡ, ಪಶ್ಚಿಮ ಬಂಗಾಳ, ತ್ರಿಪುರ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್ ಮತ್ತು ಸಿಕ್ಕಿಂ ರಾಜ್ಯಗಳಿಗೆ ಬಿಡುಗಡೆ ಮಾಡಲಾಗಿದೆ.
ಬಿಡುಗಡೆಯಾದ ಮೊತ್ತದಲ್ಲಿ ಕೇರಳಕ್ಕೆ 1,276 ಕೋಟಿ ರೂಪಾಯಿಗಳು, ಹಿಮಾಚಲ ಪ್ರದೇಶಕ್ಕೆ 952 ಕೋಟಿ ರೂಪಾಯಿಗಳು, ಪಂಜಾಬ್ಗೆ 638 ಕೋಟಿ ರೂಪಾಯಿಗಳು, ಅಸ್ಸಾಂಗೆ 631 ಕೋಟಿ ರೂಪಾಯಿಗಳು, ಪಶ್ಚಿಮ ಬಂಗಾಳಕ್ಕೆ ಸುಮಾರು 418 ಕೋಟಿ ರೂಪಾಯಿಗಳು ಮತ್ತು ಉತ್ತರಾಖಂಡಕ್ಕೆ 423 ಕೋಟಿ ರೂಪಾಯಿಗಳು ಸಂದಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.