News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಲಂಕಾ ಪ್ರವಾಸ: ಭಾರತ ಟೆಸ್ಟ್ ತಂಡದಲ್ಲಿ ಮಿಶ್ರಾಗೆ ಸ್ಥಾನ

mishra
ನವದೆಹಲಿ: ಮುಂದಿನ ತಿಂಗಳು ಶ್ರೀಲಂಕಾ ಪ್ರವಾಸ ಕೈಗೊಳ್ಳಲಿರುವ ಭಾರತ ಟೆಸ್ಟ್ ತಂಡದಲ್ಲಿ ಅಮಿತ್ ಮಿಶ್ರಾ ಸ್ಥಾನ ಪಡೆದಿದ್ದಾರೆ.

ತಂಡದಲ್ಲಿ ನಾಯಕ ವಿರಾಟ್ ಕೊಹ್ಲಿ ಸೇರಿದಂತೆ ಮುರಳಿ ವಿಜಯ್, ಶಿಖರ್ ಧವನ್, ರೋಹಿತ್ ಶರ್ಮ, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ವೃದ್ಧಿಮಾನ್ ಸಾಹಾ, ಭುವಮೇಶ್ವರ್ ಕುಮಾರ್, ಇಶಾಂತ್ ಶರ್ಮ, ಉಮೇಶ್ ಯಾದವ್, ಹರ್ಭಜನ್ ಸಿಂಗ್, ರವಿಚಂದ್ರನ್ ಅಶ್ವಿನ್, ಕೆ.ಎಲ್. ರಾಹುಲ್, ಅಮಿತ್ ಮಿಶ್ರಾ ಇದ್ದಾರೆ.

ಕಳೆದ ಬಾಂಗ್ಲಾದೇಶ ಪ್ರವಾಸದ ಸಂದರ್ಭ ಭಾರತ ತಂಡದಲ್ಲಿದ್ದ ಕರ್ಣ್ ಶರ್ಮ ಅವರ ಬದಲು ಮಿಶ್ರಾ ಅವರನ್ನು ಕರೆಸಲಾಗಿದೆ. ಮಿಶ್ರಾ ಕಳೆದ 2011ರ ಇಂಗ್ಲೆಂಡ್ ಪ್ರವಾಸದ ಬಳಿಕ ಭಾರತ ತಂಡದಲ್ಲಿ ಸ್ಥಾನ ಪಡೆದಿರಲಿಲ್ಲ. ಮಿಶ್ರಾ ಇಂಗ್ಲೆಂಡ್ ವಿರುದ್ಧ 2 ಟೆಸ್ಟ್ ಪಂದ್ಯದಿಂದ 3 ವಿಕೆಟ್, 2014-15ನೇ ಸಾಲಿನ 6 ರಣಜಿ ಪಂದ್ಯಗಳಿಂದ 10 ವಿಕೆಟ್ ಹಾಗೂ 2015ರಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 12 ಪಂದ್ಯದಿಂದ 9 ವಿಕೆಟ್ ಪಡೆದಿದ್ದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top