ನವದೆಹಲಿ : ಮೇ 25 ರಿಂದ ದೇಶೀಯ ವಿಮಾನಯಾನ ಸಂಚಾರ ಪುನರಾರಂಭಗೊಳ್ಳಲಿದೆ ಎಂದು ಬುಧವಾರ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ಹೇಳಿದೆ.
ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ದೇಶವ್ಯಾಪಿಯಾಗಿ ಲಾಕ್ ಡೌನ್ ಅನ್ನು ಜಾರಿಗೊಳಿಸಿದ್ದು ಹಿನ್ನೆಲೆಯಲ್ಲಿ ದೇಶೀಯ ವಿಮಾನಯಾನ ಸ್ಥಗಿತಗೊಂಡಿತ್ತು. ಇದೀಗ ಸಚಿವಾಲಯವೂ ಸಂಚಾರ ಪುನರಾರಂಭಕ್ಕೆ ಹಸಿರು ನಿಶಾನೆ ತೋರಿದೆ ಎಂದು ವರದಿಗಳು ತಿಳಿಸಿವೆ.
ಭಾರತದಲ್ಲಿ ಮಾರ್ಚ್ 25 ರಿಂದ ದೇಶೀಯ ವಿಮಾನಯಾನ ಸೇರಿದಂತೆ ಎಲ್ಲ ರೀತಿಯ ವಿಮಾನಗಳು ಸ್ಥಗಿತಗೊಂಡಿದ್ದವು.
ಇದೀಗ ಮೇ 25ರ ವೇಳೆಗೆ ದೇಶೀಯ ವಿಮಾನ ಸಂಚಾರವನ್ನು ಆರಂಭಿಸಲು ಸಜ್ಜಾಗಿರುವಂತೆ ಎಲ್ಲಾ ವಿಮಾನ ನಿಲ್ದಾಣಗಳು ಮತ್ತು ಏರ್ ಕ್ಯಾರಿಯರ್ಗಳಿಗೆ ಸೂಚಿಸಲಾಗಿದೆ.
ಮೂಲಗಳ ಪ್ರಕಾರ ಪ್ರಯಾಣಿಕರ ಸಂಚಾರಕ್ಕೆ ನಾಗರಿಕ ವಿಮಾನಯಾನ ಸಚಿವಾಲಯವು ವಿಶೇಷ ಕಾರ್ಯಾಚರಣೆ ಪ್ರಕ್ರಿಯೆಗಳನ್ನು ಪ್ರಕಟಿಸುವ ಸಾಧ್ಯತೆ ಇದೆ.
ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದು, “ದೇಶದ ನಾಗರಿಕ ವಿಮಾನಯಾನ ಕಾರ್ಯಾಚರಣೆಗಳು ಸೋಮವಾರ ಮೇ 25 ರಿಂದ ಆರಂಭಗೊಳ್ಳಲಿದೆ” ಎಂದಿದ್ದಾರೆ.
Domestic civil aviation operations will recommence in a calibrated manner from Monday 25th May 2020.
All airports & air carriers are being informed to be ready for operations from 25th May.
SOPs for passenger movement are also being separately issued by @MoCA_GoI.
— Hardeep Singh Puri (@HardeepSPuri) May 20, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.