ಬೆಂಗಳೂರು: ದೇಶದಾದ್ಯಂತ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಲಾಕ್ಡೌನ್ ನಿಯಮಾವಳಿಗಳು ಮೇ 31 ರ ವರೆಗೆ ಜಾರಿಯಲ್ಲಿರಲಿದ್ದು, ಜುಲೈ 1 ರಿಂದ ತೊಡಗಿದಂತೆ ಶಾಲೆಗಳನ್ನು ಆರಂಭಿಸಲು ಸರ್ಕಾರ ಚಿಂತನೆ ನಡೆಸಿದೆ.
ಈ ಕುರಿತಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು, ಈ ಬಾರಿ ಜುಲೈ ಒಂದರಿಂದ ಶಾಲಾ ಶೈಕ್ಷಣಿಕ ವರ್ಷಾರಂಭ ಮಾಡುವ ಸೂಚನೆಯನ್ನು ನೀಡಿದ್ದಾರೆ. ಜೂನ್ ತಿಂಗಳಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಇಂಗ್ಲಿಷ್ ಪತ್ರಿಕೆಯ ಪರೀಕ್ಷೆಗಳು ನಡೆಯಲಿದ್ದು, ಆ ಬಳಿಕ ಅಂದರೆ ಜುಲೈ ತಿಂಗಳಿನಿಂದಲೇ ಶಾಲೆಗಳನ್ನು ಆರಂಭಿಸಬಹುದು ಎಂಬುದಾಗಿಯೂ ಶಿಕ್ಷಣ ತಜ್ಞರ ತಂಡ ಕೇಂದ್ರ ಸರ್ಕಾರಕ್ಕೂ ಮಾಹಿತಿ ನೀಡಿದೆ.
ಈ ಬಾರಿಯ ಶೈಕ್ಷಣಿಕ ವರ್ಷ ಆರಂಭದ ಬಗ್ಗೆ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಗೊಂದಲಗಳಿದ್ದು, ಆ ಗೊಂದಲಕ್ಕೆ ಇದೀಗ ರಾಜ್ಯದ ಶಿಕ್ಷಣ ಇಲಾಖೆ ತೆರೆ ಎಳೆದಿದೆ. ಜೊತೆಗೆ ಕೊರೋನಾ ಕಾರಣಕ್ಕೆ ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದು ಮಾಡುವಂತೆ ಹಲವು ತಜ್ಞರು, ಸಾಮಾಜಿಕ ಸಂಘಟನೆಗಳು ವಿನಂತಿಸಿಕೊಂಡಿದ್ದು, ಈ ಕುರಿತಾಗಿಯೂ ಮುಖ್ಯಮಂತ್ರಿಗಳಿಗೆ ಶಿಕ್ಷಣ ಸಚಿವರು ಮಾಹಿತಿ ನೀಡಿದ್ದಾರೆ. ಕೊರೋನಾ ಹರಡದಂತೆ ಪೂರಕ ನಿಯಂತ್ರಣ ಕ್ರಮಗಳ ಜೊತೆಗೆಯೇ ಪರೀಕ್ಷೆಗಳನ್ನು ಆಯೋಜನೆ ಮಾಡುವ ಭರವಸೆಯನ್ನೂ ಸಚಿವರು ನೀಡಿದ್ದಾರೆ.
ಅದರಂತೆಯೇ ಪರಿಸ್ಥಿತಿಯನ್ನು ಅವಲೋಕನ ಮಾಡಿಕೊಂಡು, ಮಕ್ಕಳಿಗೆ ಯಾವುದೇ ರೀತಿಯಲ್ಲಿ ತೊಂದರೆಗಳಾಗದಂತೆ ಎಚ್ಚರ ವಹಿಸುವ ಮೂಲಕವೇ ಹತ್ತನೇ ತರಗತಿಯ ಪರೀಕ್ಷೆಗಳನ್ನು ನಡೆಸುವ ಭರವಸೆಯನ್ನೂ ಸುರೇಶ್ ಕುಮಾರ್ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.