ನವದೆಹಲಿ: ಕೊರೋನವೈರಸ್ ಸಾಂಕ್ರಾಮಿಕ ರೋಗಕ್ಕೆ ಸಂಬಂಧಿಸಿದಂತೆ ತುಸು ನಿರಾಳತೆ ನೀಡುವ ಮಾಹಿತಿಯನ್ನು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೊರ ಹಾಕಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಕೊರೋನಾವೈರಸ್ ಪೀಡಿತ ಒಟ್ಟು 71,106 ಜನರನ್ನು ಗುಣಪಡಿಸಲಾಗಿದೆ ಎಂಬ ಮಾಹಿತಿಯನ್ನು ನೀಡಿದೆ.
ಪ್ರಸ್ತುತ ಸಾಂಕ್ರಾಮಿಕ ರೋಗಿಗಳ ಚೇತರಿಕೆಯ ಪ್ರಮಾಣವು ದೇಶದಲ್ಲಿ ಶೇಕಡಾ 42.88 ಕ್ಕೆ ತಲುಪಿದೆ ಎಂದು ತಿಳಿಸಿದೆ.
ಕಳೆದ 24 ಗಂಟೆಗಳಲ್ಲಿ, 3, 414 ಜನರು ಚೇತರಿಸಿಕೊಂಡಿದ್ದಾರೆ ಮತ್ತು ಕೋವಿಡ್ -19ನ 7,466 ಹೊಸ ಪ್ರಕರಣಗಳು ವರದಿಯಾಗಿವೆ. ಪ್ರಸ್ತುತ ಭಾರತದಲ್ಲಿ ಇರುವ ಒಟ್ಟು ಕೊರೋನಾ ಪ್ರಕರಣಗಳು 1,65,799 ಆಗಿದೆ.
ಭಾರತದಲ್ಲಿ ಕೋವಿಡ್ -19 ಸಾಂಕ್ರಾಮಿಕ ರೋಗ ಹರಡಿದ ನಂತರ ಇದು ಹೊಸ ಪ್ರಕರಣಗಳ ಅತಿ ಹೆಚ್ಚು ಏರಿಕೆಯಾಗಿದೆ ಎಂದು ವರದಿಗಳು ತಿಳಿಸಿವೆ.
ಆರೋಗ್ಯ ಸಚಿವಾಲಯವು ಕಳೆದ 24 ಗಂಟೆಗಳಲ್ಲಿ 175 ಸಾವುಗಳು ದಾಖಲಾಗಿದೆ ಎಂದು ತಿಳಿಸಿದೆ. ರಾಷ್ಟ್ರವ್ಯಾಪಿ ಸಾವಿನ ಸಂಖ್ಯೆ 4,706 ಕ್ಕೆ ತಲುಪಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.