ಮುಂಬಯಿ: ಮಹಾರಾಷ್ಟ್ರ ರಾಜ್ಯದಲ್ಲಿ ನಿಸರ್ಗ ಚಂಡಮಾರುತದ ಭೀತಿ ಎದುರಾಗಿದೆ. ಈಹಿನ್ನೆಲೆಯಲ್ಲಿ ಎನ್ಡಿಆರ್ಎಫ್ನ 15 ತಂಡಗಳನ್ನು ಮಹಾರಾಷ್ಟ್ರದ ವಿವಿಧ ಜಿಲ್ಲೆಗಳಲ್ಲಿ ನಿಯೋಜಿಸಲಾಗಿದೆ. ತಂಡವನ್ನು ನಿಯೋಜಿಸಲಾಗಿರುವ ಸ್ಥಳಗಳಲ್ಲಿ ಮುಂಬೈ, ರಾಯಗಡ್, ಪಾಲ್ಘರ್, ಥಾಣೆ, ರತ್ನಗಿರಿ, ಸಿಂಧುದುರ್ಗ್, ನವೀ ಮುಂಬೈ ಸೇರಿವೆ.
ಎನ್ಡಿಆರ್ಎಫ್ ತಂಡವು ಕಡಲತೀರದ ಪ್ರದೇಶದಲ್ಲಿ ಕಣ್ಗಾವಲು ನಡೆಸುತ್ತಿದೆ. ಎನ್ಡಿಆರ್ಎಫ್ ಕಮಾಂಡರ್ ಈಶ್ವರ್ ಮೇಟ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ”ಹೈ ಅಲರ್ಟ್ ಇರುವ ಸ್ಥಳಗಳಲ್ಲಿ ಎನ್ಡಿಆರ್ಎಫ್ ತಂಡಗಳನ್ನು ನಿಯೋಜಿಸಲಾಗಿದೆ. ಚಂಡಮಾರುತಗಳ ಸಮಯದಲ್ಲಿ ತೊಂದರೆಗಳನ್ನು ಎದುರಿಸಲು ಸ್ಥಳೀಯರಿಗೆ ಎನ್ಡಿಆರ್ಎಫ್ ತಂಡಗಳು ಸಹಾಯ ಮಾಡುತ್ತವೆ” ಎಂದಿದ್ದಾರೆ.
ಚಂಡಮಾರುತದ ಕುರಿತು ಮಾತನಾಡಿದ ಮಹಾರಾಷ್ಟ್ರ ಪುನರ್ವಸತಿ ಸಚಿವ ವಿಜಯ್ ವಟ್ಟಿವಾರ್ ಅವರು, ದಕ್ಷಿಣ ಅರೇಬಿಯನ್ ಸಮುದ್ರದಲ್ಲಿ ಚಂಡಮಾರುತದ ಪರಿಣಾಮವನ್ನು ಹೆಚ್ಚು ಕಾಣಬಹುದು, ನಾವು ಈಗಾಗಲೇ ಪ್ರದೇಶವನ್ನು ಎಚ್ಚರಿಸಿದ್ದೇವೆ. ಕೊಂಕಣದ ಮುಂಬೈಯಲ್ಲಿರುವ ಸಮುದ್ರ ತೀರವನ್ನು ಖಾಲಿ ಮಾಡಲು ಮೀನುಗಾರರಿಗೆ ಸೂಚಿಸಲಾಗಿದೆ ಎಂದು ಅವರು ಹೇಳಿದರು. ಸಿಂಧುದುರ್ಗ್ದಂತಹ ಸಮುದ್ರ ಪ್ರದೇಶಗಳಲ್ಲಿ 6 ಎನ್ಡಿಆರ್ಎಫ್ ತಂಡಗಳನ್ನು ನಿಯೋಜಿಸಲಾಗಿದೆ.
ಜನರು ಭಯಭೀತರಾಗಬಾರದು ಎಂದು ಸಚಿವರು ಮನವಿ ಮಾಡಿದ್ದಾರೆ ಮತ್ತು ಪರಿಸ್ಥಿತಿಯನ್ನು ಎದುರಿಸಲು ಮಹಾರಾಷ್ಟ್ರ ಸರ್ಕಾರ ಸಂಪೂರ್ಣ ಸಿದ್ಧವಾಗಿದೆ ಎಂದು ಹೇಳಿದ್ದಾರೆ.
ಆಗ್ನೇಯ ಮತ್ತು ಪಕ್ಕದ ಪೂರ್ವ-ಮಧ್ಯ ಅರೇಬಿಯನ್ ಸಮುದ್ರ ಮತ್ತು ಲಕ್ಷದ್ವೀಪ ಪ್ರದೇಶದ ಡಿಪ್ರೆಶನ್ ಮಂಗಳವಾರದ ವೇಳೆಗೆ ನಿಸರ್ಗ ಚಂಡಮಾರುತವಾಗಿ ತೀವ್ರಗೊಳ್ಳುವ ನಿರೀಕ್ಷೆಯಿದೆ ಮತ್ತು ಇದು ಮುಂಬೈ, ಥಾಣೆ, ಪಾಲ್ಘರ್, ರತ್ನಾಗಿರಿ, ಸಿಂಧುದರ್ಗ್ ಮೇಲೆ ಪರಿಣಾಮ ಬೀರುತ್ತದೆ ಎಂದು ಭಾರತ ಹವಾಮಾನ ಇಲಾಖೆ ಸೋಮವಾರ ತಿಳಿಸಿದೆ.
ಐಎಂಡಿ ಪ್ರಕಾರ, ಮಂಗಳವಾರ ಮತ್ತು ಬುಧವಾರದಂದು ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.