ನವದೆಹಲಿ : ಹಿಂದೂ ದೇವರುಗಳ ವಿರುದ್ಧ ಅವಹೇಳನಕಾರಿ ಟೀಕೆಗಳನ್ನು ಮಾಡಿದ ತನ್ನ ಸಿಬ್ಬಂದಿಯನ್ನು ವಿಮಾನಯಾನ ಸಂಸ್ಥೆ GoAir ಕೆಲಸದಿಂದ ವಜಾಗೊಳಿಸಿದೆ. ಆತ ಮಾಡಿದ ಟ್ವೀಟ್ನ ಸ್ಕ್ರೀನ್ಶಾಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ನಂತರ ಆಸಿಫ್ ಖಾನ್ ಎಂಬಾತನ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ.
ಈತ ಟ್ವಿಟ್ಟರ್ನಲ್ಲಿ ಆಕ್ಷೇಪಾರ್ಹ ಹಿಂದೂಫೋಬಿಕ್ ಕಾಮೆಂಟ್ಗಳನ್ನು ಮಾಡುತ್ತಿದ್ದಾನೆ ಎಂದು ಆರೋಪಿಸಲಾಗಿದೆ.
ಖಾನ್ ಹಾಕಿದ ಕಾಮೆಂಟ್ಗಳನ್ನು ವಿವಿಧ ಸಾಮಾಜಿಕ ಮಾಧ್ಯಮ ಬಳಕೆದಾರರು ಗಮನಿಸಿ, ಆತನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಟ್ವಿಟರ್ನಲ್ಲಿ ವಿಮಾನಯಾನ ಸಂಸ್ಥೆಯನ್ನು ಟ್ಯಾಗ್ ಮಾಡಲು ಆರಂಭಿಸಿದ್ದಾರೆ.
ಖಾನ್ ತನ್ನ ಟ್ವಿಟ್ಟರ್ ಬಯೋದಲ್ಲಿ ತಾನು ಗೋಏರ್ನ ಕ್ಯಾಬಿನ್ ಕ್ರ್ಯೂ ಸದಸ್ಯನೆಂದು ಹೇಳಿಕೊಂಡಿದ್ದಾನೆ, ಆದರೆ ಆತ ವಿಮಾನಯಾನ ಸಂಸ್ಥೆಯಲ್ಲಿ ಸಹ ಪೈಲಟ್ ಆಗಲು ತರಬೇತಿ ಪಡೆಯುತ್ತಿದ್ದ ಎಂದು ತಿಳಿದುಬಂದಿದೆ ಎಂದು ವರದಿಗಳು ತಿಳಿಸಿವೆ.
ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟದಲ್ಲಿ ಆಕ್ರೋಶಗಳು ವ್ಯಕ್ತವಾದ ಹಿನ್ನಲೆಯಲ್ಲಿ ಗೋಏರ್, ತನ್ನ ಸಾಮಾಜಿಕ ಮಾಧ್ಯಮ ನೀತಿಗೆ ಸಂಬಂಧಿಸಿದ ಉದ್ಯೋಗ ನಿಯಮಗಳನ್ನು ಉಲ್ಲಂಘಿಸುವ ತನ್ನ ನೌಕರರ ಬಗ್ಗೆ ಶೂನ್ಯ ಸಹಿಷ್ಣು ನೀತಿಯನ್ನು ಜಾರಿಗೊಳಿಸಲಾಗುತ್ತದೆ ಎಂಬ ಭರವಸೆ ನೀಡಿತ್ತು. ಅದರಂತೆ ಆತನನ್ನು ವಜಾಗೊಳಿಸಲಾಗಿದೆ ಎಂದು ಸಂಸ್ಥೆ ಘೋಷಣೆಯನ್ನು ಮಾಡಿದೆ.
— GoAir (@goairlinesindia) June 4, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.