ಶಂಕರನಾರಾಯಣ : ಇಲ್ಲಿನ ಕಾಲೇಜು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯಾಗಿರುವ ಎಡಮೊಗೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಾಲಚಂದ್ರ ಕುಲಾಲ್ನ ಬಂಧನಕ್ಕೆ ಆಗ್ರಹಿಸಿ ಶಂಕರನಾರಾಯಣ ಕಾಲೇಜಿನ ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನಾ ಮೆರವಣಿಗೆ ನಡೆಸಿ ಅರ್ಧ ಗಂಟೆ ರಾಜ್ಯ ಹೆದ್ದಾರಿಯನ್ನು ಬಂದ್ ಮಾಡಿದರು . ವಿದ್ಯಾರ್ಥಿಗಳ ಪ್ರತಿಭಟನೆಗೆ ಎಬಿವಿಪಿ ಬೆಂಬಲ ನೀಡಿತ್ತು. ಶಂಕರನಾರಾಯಣದಲ್ಲಿ ಶುಕ್ರವಾರ ವಿದ್ಯಾರ್ಥಿಗಳು, ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದರು.
ಬಿಜೆಪಿ ಯುವಮೋರ್ಚಾ, ರಾಜ್ಯ ಕಾರ್ಮಿಕ ಘಟಕ ಮತ್ತು ವಿವಿಧ ಸಂಘಟನೆಗಳ ಸದಸ್ಯರು ಎಡಮೊಗೆ ಪಂಚಾಯತ್ ಎದುರು ಪ್ರತಿಭಟನೆ ನಡೆಸಿ ಬಾಲಚಂದ್ರ ಕುಲಾಲ್ನ ಪಂಚಾಯತ್ ಸದಸ್ಯತ್ವ ರದ್ದು ಮಾಡಿ ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿದರು. ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಶಂಕರನಾರಾಯಾಣ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.