ಬೆಂಗಳೂರು: ಕೊರೋನಾ ಸಂಕಷ್ಟದ ನಡುವೆಯೇ ಪಿಯುಸಿ ಪರೀಕ್ಷೆ ಮುಗಿಸಿರುವ ರಾಜ್ಯ ಸರ್ಕಾರ, ನಾಳೆಯಿಂದ ನಡೆಯಲಿರುವ ಎಸ್ಎಸ್ಎಲ್ಸಿ ಪರೀಕ್ಷೆಗೂ ಸಿದ್ಧತೆಗಳನ್ನು ಮಾಡಿಕೊಂಡಿದೆ.
ರಾಜ್ಯದಲ್ಲಿ ಸುಮಾರು 8.5 ಲಕ್ಷ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು ಬರೆಯಲಿದ್ದು , ಅವರ ಆರೋಗ್ಯಕ್ಕೆ ಪೂರಕವಾದ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದೂಕೊಳ್ಳುವ ಮೂಲಕವೇ ಪರೀಕ್ಷೆಗಳನ್ನು ಬರೆಯುವ ವ್ಯವಸ್ಥೆ ಮಾಡಲಾಗಿರುವುದಾಗಿಯೂ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಮಾಹಿತಿ ನೀಡಿದ್ದಾರೆ.
ಪರೀಕ್ಷಾ ಕೇಂದ್ರಗಳಲ್ಲಿ ಸ್ಯಾನಿಟೈಸಿಂಗ್ ವ್ಯವಸ್ಥೆ, ಆರೋಗ್ಯ ತಪಾಸಣೆಗೆ ಆದ್ಯತೆ ನೀಡಲಾಗಿದೆ. ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಕಡ್ಡಾಯ ಮಾಸ್ಕ್ ಧಾರಣೆ ಸೇರಿದಂತೆ ಇನ್ನಿತರ ಅಗತ್ಯ ಕ್ರಮಗಳ ಕುರಿತಾಗಿಯೂ ಎಚ್ಚರ ವಹಿಸಲಾಗುವುದಾಗಿ ಅವರು ಮಾಹಿತಿ ನೀಡಿದ್ದಾರೆ. ಜೊತೆಗೆ ಕಂಟೈನ್ಮೆಂಟ್ ವಲಯಗಳಿಂದ ಪರೀಕ್ಷೆಗೆ ಆಗಮಿಸುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಗಳ ವ್ಯವಸ್ಥೆಯನ್ನು ಮಾಡಲಾಗುತ್ತದೆ ಎಂದೂ ಅವರು ಮಾಹಿತಿ ನೀಡಿದ್ದಾರೆ. ಅನಾರೋಗ್ಯ ಪೀಡಿತ ಮಕ್ಕಳಿಗೂ ಪರೀಕ್ಷೆ ಬರೆಯಲು ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗುತ್ತದೆ ಎಂದೂ ಅವರು ತಿಳಿಸಿದ್ದಾರೆ.
ಜೊತೆಗೆ ಅಧಿಕಾರಿಗಳೂ ಸಹ ಸರ್ಕಾರದ ಎಲ್ಲಾ ಸೂಚನೆಗಳನ್ನು ಪಾಲಿಸಿಕೊಂಡು ಸಮರ್ಪಣಾ ಭಾವದಿಂದ ಕೆಲಸ ಮಾಡಬೇಕು. ಮಕ್ಕಳ ಆರೋಗ್ಯ ರಕ್ಷಣೆಯ ಸಂಪೂರ್ಣ ಹೊಣೆಗಾರಿಕೆಯನ್ನು ಹೊತ್ತುಕೊಂಡು ಅಚ್ಚುಕಟ್ಟಾಗಿ ಪರೀಕ್ಷೆಗಳನ್ನು ನಡೆಸುವಂತೆಯೂ ತಿಳಿಸಿದ್ದಾರೆ.
ಒಟ್ಟಿನಲ್ಲಿ ಸಂಪೂರ್ಣ ಕೊರೋನಾ ಮುಂಜಾಗ್ರತೆ ಕ್ರಮಗಳನ್ನು ಅನುಸರಿಸಿಕೊಂಡೇ ಸರ್ಕಾರ ಎಸೆಸೆಲ್ಸಿ ಪರೀಕ್ಷೆ ನಡೆಸುತ್ತಿದ್ದು, ಪೋಷಕರಲ್ಲಿನ ಆತಂಕ ನಿವಾರಣೆಗೆ ಮುಂದಾಗಿದೆ ಎಂದರೂ ತಪ್ಪಾಗಲಾರದು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.