
ಕಾನ್ಪುರ: ಉತ್ತರಪ್ರದೇಶದ ನಟೋರಿಯಸ್ ಕ್ರಿಮಿನಲ್, 8 ಪೊಲೀಸರ ಹತ್ಯೆಗೈದ ಪಾಪಿ ವಿಕಾಸ್ ದುಬೆಗೆ ಸೇರಿದ ಮನೆಯನ್ನು ಕಾನ್ಪುರ ಜಿಲ್ಲಾಡಳಿತ ಶನಿವಾರ ಸಂಪೂರ್ಣ ನೆಲಸಮ ಮಾಡಿದೆ. ಈತನ ವಿರುದ್ಧ 60 ಕ್ರಿಮಿನಲ್ ಪ್ರಕರಣಗಳು ಇವೆ. ಉತ್ತರಪ್ರದೇಶ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಆತನನ್ನು ನೆಲಸಮ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ.
ವಿಕಾಸ್ ದುಬೆಯನ್ನು ಬಂಧಿಸಲು ಸುಮಾರು 25 ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಬೇರೆ ಬೇರೆ ರಾಜ್ಯಗಳಲ್ಲಿ ಈತನಿಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದೆ. ಸುಮಾರು 500ಕ್ಕೂ ಅಧಿಕ ಮೊಬೈಲ್ ಸಂಖ್ಯೆಗಳನ್ನು ಪರಿಶೀಲನೆ ನಡೆಸುತ್ತಿದೆ.
ಮಾತ್ರವಲ್ಲದೇ ಆತನ ಅಡಗುತಾಣದ ಬಗ್ಗೆ ಮಾಹಿತಿ ನೀಡಿದವರಿಗೆ 50 ಸಾವಿರ ರೂಪಾಯಿಗಳ ಬಹುಮಾನವನ್ನು ಘೋಷಣೆ ಮಾಡಲಾಗಿದೆ.
ಇತ್ತೀಚಿಗಷ್ಟೇ ಈತನನ್ನು ಬಂಧಿಸಲು ಪೊಲೀಸರು ಈತನ ಮನೆ ಮೇಲೆ ದಾಳಿ ನಡೆಸಿದ್ದರು. ಆದರೆ ಪ್ರತಿದಾಳಿ ನಡೆಸಿದ್ದ ಈತ 8 ಮಂದಿ ಪೊಲೀಸರನ್ನು ಹತ್ಯೆ ಮಾಡಿದ್ದ.
ಇದೀಗ ಪೊಲೀಸರು ಅತನನ್ನು ಬಂಧಿಸಿದ ಕಠಿಣ ಶಿಕ್ಷೆ ಒಳಪಡಿಸಲು ದೊಡ್ಡ ಮಟ್ಟದಲ್ಲಿ ಪ್ರಯತ್ನಗಳನ್ನು ಆರಂಭಿಸಿದ್ದಾರೆ. ಅದರ ಪ್ರಮುಖ ಹೆಜ್ಜೆಯಾಗಿ ಆತನ ಮನೆಯನ್ನು ನೆಲಸಮ ಮಾಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.



