ನವದೆಹಲಿ: ನವದೆಹಲಿಯ ಪಟಿಯಾಲ ನ್ಯಾಯಾಲಯ ಶನಿವಾರ ಕ್ರಿಕೆಟಿಗ ಎಸ್.ಶ್ರೀಶಾಂತ್ ಸೇರಿದಂತೆ ಇತರ 41 ಮಂದಿಯನ್ನು ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಆರೋಪದಿಂದ ಮುಕ್ತಗೊಳಿಸಿ ಕ್ಲೀನ್ಚಿಟ್ ನೀಡಿದೆ.
2013ರ ಐಪಿಎಲ್ ಬೆಟ್ಟಿಂಗ್ ಮತ್ತು ಫಿಕ್ಸಿಂಗ್ ಪ್ರಕರಣದಲ್ಲಿ ರಾಜಸ್ಥಾನ ರಾಯಲ್ಸ್ ತಂಡದಲ್ಲಿದ್ದ ಶ್ರೀಶಾಂತ್, ಅಜಿತ್ ಚಂಡೀಲಾ ಮತ್ತು ಅಂಕಿತ್ ಚೌವ್ಹಾಣ್ ಸೇರಿದಂತೆ ಹಲವರು ಆರೋಪಿಗಳಾಗಿದ್ದರು. ಆದರೆ ಇವರ ವಿರುದ್ಧ ಸರಿಯಾದ ಸಾಕ್ಷಿಗಳು ಇಲ್ಲದ ಕಾರಣ ನ್ಯಾಯಾಲಯ ಆರೋಪ ಮುಕ್ತಗೊಳಿಸಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಶ್ರೀಶಾಂತ್, ‘ಪಶ್ಚತಾಪವಿಲ್ಲ, ಯಾರನ್ನೂ ದೂರುವುದಿಲ್ಲ. ದೇಶವರು ಬಯಸಿದರೆ ಮತ್ತೆ ಕ್ರಿಕೆಟ್ಗೆ ಮರಳುತ್ತೇನೆ. ಬಿಸಿಸಿಐನ ಸೌಲಭ್ಯಗಳನ್ನು ಬಳಸಲು ಮತ್ತೆ ಅನುಮತಿ ಕೋರುತ್ತೇನೆ’ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.