ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಕಾರಣದಿಂದಾಗಿ ಇನ್ನೂ ಶಾಲೆ ಆರಂಭವಾಗಿಲ್ಲ. ಸಾಂಕ್ರಾಮಿಕ ಬಿಕ್ಕಟ್ಟಿನಿಂದಾಗಿ ಈಗಾಗಲೇ ಶಾಲೆಗಳ ಆರಂಭಕ್ಕೂ ತಡವಾಗಿದ್ದು ಈ ಹಿನ್ನೆಲೆಯಲ್ಲಿ ಸಿಬಿಎಸ್ಇ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ.
2020-21 ನೇ ಸಾಲಿನಲ್ಲಿ ಒಂಬತ್ತನೇ ತರಗತಿಯಿಂದ ಪಿಯುಸಿ ವರೆಗಿನ ಪಠ್ಯವನ್ನು 30% ದಷ್ಟು ಕಡಿಮೆ ಮಾಡಲು ಮುಂದಾಗಿದೆ. ತೀರಾ ಮುಖ್ಯವೆನಿಸಿದ ಪಠ್ಯಗಳನ್ನು ಹೊರತುಪಡಿಸಿದಂತೆ ಉಳಿದಂತೆ 30% ದಷ್ಟು ಪಠ್ಯ ವಿಚಾರಗಳನ್ನು ತೆಗೆದು ಹಾಕುವುದಾಗಿ ಸಿಬಿಎಸ್ಇ ಗೆ ಕೇಂದ್ರ ಸರ್ಕಾರ ತಿಳಿಸಿರುವುದಾಗಿಯೂ ಸಚಿವ ರಮೇಶ್ ಪೋಕ್ರಿಯಾಲ್ ಅವರು ಮಾಹಿತಿ ನೀಡಿದ್ದಾರೆ.
ವಿದ್ಯಾರ್ಥಿಗಳಿಗೆ ಹೊರೆಯಾಗದಂತೆ ಈ ಕ್ರಮವನ್ನು ತೆಗೆದುಕೊಳ್ಳಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಪೋಖ್ರಿಯಾಲ್ ತಿಳಿಸಿದ್ದಾರೆ. ಹಲವು ದಿನಗಳ ಹಿಂದೆ ಪಠ್ಯ ಗಳನ್ನು ಕಡಿತಗೊಳಿಸುವ ಬಗ್ಗೆ ಶಿಕ್ಷಣ ತಜ್ಞರ ಬಳಿ ಸಲಹೆ, ಅಭಿಪ್ರಾಯಗಳನ್ನು ಕೇಳಲಾಗಿತ್ತು. ಇದಕ್ಕೆ ಸುಮಾರು 1.5K ಸಲಹೆ ಸೂಚನೆಗಳು ಬಂದಿರುವುದಾಗಿಯೂ ತಿಳಿಸಿದ್ದು, ಅಭೂತಪೂರ್ವ ಸ್ಪಂದನೆಗೆ ಧನ್ಯವಾದ ತಿಳಿಸಿದ್ದಾರೆ. ದೇಶ ಮತ್ತು ಜಗತ್ತಿನ ಸಾಂಕ್ರಾಮಿಕ ಸನ್ನಿವೇಶಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಂಡಿರುವುದಾಗಿಯೂ ಸಚಿವರು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.