ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಸಚಿವ ಸಂಪುಟವನ್ನು ಎ.೮ರಂದು ವಿಸ್ತರಣೆಗೊಳಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಜಮ್ಮು ಕಾಶ್ಮೀರದಲ್ಲಿ ಬಿಜೆಪಿಯ ಮೈತ್ರಿ ಪಕ್ಷವಾಗಿರುವ ಪಿಡಿಪಿ ಸಂಸದೆ ಮೆಹಬೂಬ ಮುಫ್ತಿ ಅವರಿಗೆ ಸಂಪುಟದಲ್ಲಿ ಸ್ಥಾನ ಸಿಗುವುದು ಬಹುತೇಕ ಖಚಿತ ಎನ್ನಲಾಗಿದೆ. ಅವರೊಂದಿಗೆ ಶಿವಸೇನೆಯ ರಾಜ್ಯಸಭಾ ಸದಸ್ಯ ಅನಿಲ್ ದೇಸಾಯಿ ಅವರೂ ಸಂಪುಟ ಸೇರುವ ಸಾಧ್ಯತೆ ಇದೆ.
ಪ್ರಸ್ತುತ ರಾಜ್ಯ ಖಾತೆ ಸಚಿವರಾಗಿರುವ ಮುಕ್ತಾರ್ ಅಬ್ಬಾಸ್ ನಖ್ವಿ ಅವರನ್ನು ಉನ್ನತ ಹುದ್ದೆಗೇರಿಸುವ ಸಾಧ್ಯತೆ ಇದೆ. ಅಲ್ಪಸಂಖ್ಯಾತ ಖಾತೆ ಸಚಿವರಾಗಿರುವ ನಜ್ಮಾ ಹೆಫ್ತುಲ್ಲಾ ಅವರನ್ನು ಕೈಬಿಡುವ ಸಾಧ್ಯತೆ ಇದೆ.
ಮೋದಿ ಪ್ರಧಾನಿಯಾದ ಬಳಿಕ ನವೆಂಬರ್ನಲ್ಲಿ ಮೊದಲ ಬಾರಿಗೆ ಸಂಪುಟ ವಿಸ್ತರಣೆ ಮಾಡಿದ್ದರು. ಈ ವೇಳೆ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರನ್ನು ರಕ್ಷಣಾ ಖಾತೆಗೆ ಮತ್ತು ಮಾಜಿ ಶಿವಸೇನಾ ಮುಖಂಡ ಸುರೇಶ್ ಪ್ರಭು ಅವರನ್ನು ರೈಲ್ವೇ ಖಾತೆಗೆ ನಿಯೋಜಿಸಿದ್ದರು. ಮತ್ತು ಹಲವಾರು ಸಚಿವರ ಖಾತೆ ಬದಲಾವಣೆ ಮಾಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.