ನವದೆಹಲಿ: ಕೇಂದ್ರ ಮಾನವ ಸಂಪನ್ಮೂಲ ಮತ್ತು ಅಭಿವೃದ್ಧಿ ಸಚಿವಾಲಯವು ತನ್ನ ಸ್ಟಡಿ ಇನ್ ಇಂಡಿಯಾ ಕಾರ್ಯಕ್ರಮದಡಿಯಲ್ಲಿ ಮೊದಲ ಬಾರಿಗೆ ಇಂಡಿಯನ್ ಸ್ಕೊಲಾಸ್ಟಿಕ್ ಅಸೆಸ್ಮೆಂಟ್ (ಇಂಡ್-ಸ್ಯಾಟ್) ಟೆಸ್ಟ್ 2020 ಅನ್ನು ನಡೆಸಿದೆ ಎಂದು ವರದಿಗಳು ತಿಳಿಸಿವೆ.
ನೇಪಾಳ, ಇಥಿಯೋಪಿಯಾ, ಬಾಂಗ್ಲಾದೇಶ, ಭೂತಾನ್, ಉಗಾಂಡಾ, ಟಾಂಜೇನಿಯಾ, ರುವಾಂಡಾ, ಶ್ರೀಲಂಕಾ, ಕೀನ್ಯಾ, ಜಾಂಬಿಯಾ, ಇಂಡೋನೇಷ್ಯಾ ಮತ್ತು ಮಾರಿಷಸ್ ದೇಶಗಳಿಂದ ಸುಮಾರು ಐದು ಸಾವಿರ ಅಭ್ಯರ್ಥಿಗಳು ನಿನ್ನೆ ಪರೀಕ್ಷೆಗೆ ಹಾಜರಾಗಿದ್ದರು. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (National Testing Agency) ಪರೀಕ್ಷೆಯನ್ನು ಇಂಟರ್ನೆಟ್ ಮೋಡ್ನಲ್ಲಿ ನಡೆಸಿತು.
ಆಯ್ದ ಭಾರತೀಯ ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ಮಾಡಲು ವಿದೇಶಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಮತ್ತು ಪ್ರವೇಶಾತಿ ನೀಡುವ ಪರೀಕ್ಷೆ ಇಂಡ್-ಸ್ಯಾಟ್ ಆಗಿದೆ ಎಂದು ಸಚಿವಾಲಯ ತಿಳಿಸಿದೆ. ಭಾರತದಲ್ಲಿ ಅಧ್ಯಯನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಪಾಂಡಿತ್ಯಪೂರ್ಣ ಸಾಮರ್ಥ್ಯವನ್ನು ಅಳೆಯಲು ಈ ಪರೀಕ್ಷೆಯನ್ನು ವಿನ್ಯಾಸಗೊಳಿಸಲಾಗಿದೆ.
ಸ್ಟಡಿ ಇನ್ ಇಂಡಿಯಾ ಕಾರ್ಯಕ್ರಮದಡಿ ಪದವಿಪೂರ್ವ ಮತ್ತು ಸ್ನಾತಕೋತ್ತರ ಕಾರ್ಯಕ್ರಮಗಳಿಗೆ ವಿದ್ಯಾರ್ಥಿವೇತನ ಹಂಚಿಕೆಗಾಗಿ ಅರ್ಹ ವಿದ್ಯಾರ್ಥಿಗಳನ್ನು ಶಾರ್ಟ್ಲಿಸ್ಟ್ ಮಾಡಲು ಇಂಡ್-ಸ್ಯಾಟ್ ಅಂಕಗಳು ಮಾನದಂಡವಾಗಿ ಕಾರ್ಯನಿರ್ವಹಿಸುತ್ತವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.