ನವದೆಹಲಿ: ಉತ್ತರ ಕೊರಿಯಾಗೆ ಅಗತ್ಯ ವೈದ್ಯಕೀಯ ನೆರವನ್ನು ನೀಡಲು ವಿಶ್ವ ಆರೋಗ್ಯ ಸಂಸ್ಥೆಯಿಂದ ಮನವಿ ಸ್ವೀಕರಿಸಿರುವ ಭಾರತ, 1 ಮಿಲಿಯನ್ ಡಾಲರ್ ಮೌಲ್ಯದ ಔಷಧ ಮತ್ತು ಉಪಕರಣಗಳನ್ನು ಕಳುಹಿಸಿಕೊಡಲು ಒಪ್ಪಿಕೊಂಡಿದೆ ಎಂದು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಾಹಿತಿ ನೀಡಿದೆ.
ಅನಾರೋಗ್ಯದಿಂದ ಉತ್ತರ ಕೊರಿಯಾದ ಜನರು ತತ್ತರಿಸುತ್ತಿದ್ದಾರೆ. ಔಷಧಗಳ ಕೊರತೆಯಿಂದ ಜನರು ಸಾಕಷ್ಟು ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಭಾರತ ಸರ್ಕಾರ ಮಾನವೀಯತೆಯ ಆಧಾರದಲ್ಲಿ 1 ಮಿಲಿಯನ್ ಡಾಲರ್ ಮೌಲ್ಯದ ಕ್ಷಯ ರೋಗದ ಔಷಧಗಳನ್ನು ಕಳುಹಿಸಿ ಕೊಡಲು ನಿರ್ಧರಿಸಿದೆ ಎಂದು ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆಯ ವತಿಯಿಂದ ದಕ್ಷಿಣ ಕೊರಿಯಾದಲ್ಲಿ ಮಾಡಲಾಗುತ್ತಿರುವ ಕ್ಷಯ ರೋಗ ನಿಯಂತ್ರಣಾ ಚಟುವಟಿಕೆಗಳಿಗೆ ಪೂರಕವಾಗಿ ಕ್ಷಯ ರೋಗದ ಔಷಧವನ್ನು ಕಳುಹಿಸಿಕೊಡಲಾಗುತ್ತಿದೆ ಎಂದೂ ತಿಳಿಸಿದೆ.
ಈ ನೆರವನ್ನು ನೀಡುವ ವಿಚಾರದಲ್ಲಿ ಅಮೆರಿಕಾದ ನಿರ್ಬಂಧದ ಸಮಸ್ಯೆ ಎದುರಾಗುವುದಿಲ್ಲ ಎಂದೂ ವಿದೇಶಾಂಗ ಸಚಿವಾಲಯ ಸ್ಪಷ್ಟನೆ ನೀಡಿದೆ. ಇನ್ನು ಈ ಔಷಧಗಳನ್ನು ಉತ್ತರ ಕೊರಿಯಾದ ಭಾರತೀಯ ರಾಯಭಾರಿ ಮಲ್ಹಾರಿ ಗೊಟ್ ಸುರ್ವೆ ಅವರು ಅಲ್ಲಿನ ಅಧಿಕಾರಿಗಳಿಗೆ ಹಸ್ತಾಂತರಿಸಿರುವುದಾಗಿಯೂ ಕೇಂದ್ರ ವಿದೇಶಾಂಗ ವ್ಯವಹಾರಗಳ ಇಲಾಖೆ ಮಾಹಿತಿ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.