ನವದೆಹಲಿ: ಪಂಜಾಬ್ನಲ್ಲಿ ನಡೆದ ಉಗ್ರರ ದಾಳಿಯ ಬಗ್ಗೆ ರಾಜಕೀಯ ಮಾಡಕೂಡದು, ಇದು ಇಡೀ ದೇಶವೇ ಒಗ್ಗಟ್ಟಿನಿಂದ ಈ ಘಟನೆಯನ್ನು ಖಂಡಿಸಬೇಕು ಎಂಡು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ತಿಳಿಸಿದ್ದಾರೆ.
ಪಂಜಾಬ್ ಘಟನೆ ಗುಪ್ತಚರ ಇಲಾಖೆ ಮತ್ತು ಕೇಂದ್ರ ವೈಫಲ್ಯ ಎಂದು ಕಾಂಗ್ರೆಸ್ ಬಣ್ಣಿಸಿತ್ತು, ಇದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಅವರು, ಪಂಜಾಬ್ ಉಗ್ರರ ದಾಳಿಯ ಬಗ್ಗೆ ಕಾಂಗ್ರೆಸ್ನಂತಹ ಪಕ್ಷ ದೂಷಣೆಯಲ್ಲಿ ತೊಡಗಿದೆ, ಇದರಿಂದ ಜನರಿಗೆ ತಪ್ಪು ಸಂದೇಶ ರವಾನೆಯಾಗುತ್ತಿದೆ. ಕಾಂಗ್ರೆಸ್ ಧೋರಣೆ ದುರಾದೃಷ್ಟಕರ ಎಂದಿದ್ದಾರೆ.
ಘಟನೆಯ ಬಗ್ಗೆ ಸಂಸತ್ತಿನಲ್ಲಿ ಹೇಳಿಕೆ ನೀಡುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.
ಪಂಜಾಬ್ನ ಗುರುದಾಸ್ಪುರದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಆರು ಮಂದಿ ಮೃತರಾಗಿದ್ದಾರೆ. ಹಲವಾರು ಮಂದಿಗೆ ಗಾಯಗಳಾಗಿವೆ. ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಹೊಡೆದುರುಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.