ಗುವಾಹಟಿ: ಭಾರತ ಅಣುಶಕ್ತಿ ರಾಷ್ಟ್ರವಾಗಿ ಹೊರಹೊಮ್ಮುವಲ್ಲಿ ಪ್ರಮುಖ ಪಾತ್ರವಾಹಿಸಿದ್ದ, ಜನಾನುರಾಗಿ ರಾಷ್ಟ್ರಪತಿಯಾಗಿ ಉತ್ತಮ ನಾಯಕತ್ವ ನೀಡಿದ್ದ ಭಾರತೀಯರ ಕಣ್ಮಣಿ ಎಪಿಜೆ ಅಬ್ದುಲ್ ಕಲಾಂ ಸೋಮವಾರ ರಾತ್ರಿ ಮೇಘಾಲಯದ ಶಿಲ್ಲಾಂಗ್ನಲ್ಲಿ ಇಹಲೋಕ ತ್ಯಜಿಸಿದ್ದಾರೆ.
ಈಗಾಗಲೇ ಅವರ ಪಾರ್ಥಿವ ಶರೀರವನ್ನು ಅಸ್ಸಾಂನ ಗುವಾಹಟಿಗೆ ತರಲಾಗಿದ್ದು, ವಿಶೇಷ ವಿಮಾನದ ಮೂಲಕ ದೆಹಲಿಗೆ ತರಲಾಗುತ್ತದೆ. ಇಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಮೂರು ಸೇನಾ ಮುಖ್ಯಸ್ಥರು ಪಾರ್ಥಿವ ಶರೀರವನ್ನು ಬರಮಾಡಿಕೊಳ್ಳಲಿದ್ದಾರೆ, ಬಳಿಕ ಸಾರ್ವಜನಿಕರಿಗೆ ಅಂತಿಮ ದರ್ಶನ ಪಡೆಯಲು ಅನುವು ಮಾಡಿಕೊಡಲಾಗುತ್ತದೆ.
ಜನರ ರಾಷ್ಟ್ರಪತಿ ಎಂದೇ ಖ್ಯಾತರಾಗಿದ್ದ ಕಲಾಂ ಅವರಿಗೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ದೇಶದಲ್ಲಿ 7 ದಿನಗಳ ಶೋಕಾಚರಣೆಯನ್ನು ಘೋಷಿಸಿದೆ. ಇಂದು ಸಭೆ ಸೇರಲಿರುವ ಕೇಂದ್ರ ಸಂಪುಟ ಸಾಧಕನ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಿದೆ.
ಕಲಾಂ ಅವರ ಜನ್ಮ ಸ್ಥಳವಾದ ತಮಿಳುನಾಡಿನ ರಾಮೇಶ್ವರಂನಲ್ಲಿಯೇ ಅವರ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.