ನವದೆಹಲಿ: ಆಗಸ್ಟ್ 7ರಂದು ರಾಷ್ಟ್ರೀಯ ಕೈಮಗ್ಗ ದಿನವನ್ನು ಆಚರಣೆ ಮಾಡಲಾಗುತ್ತದೆ. 1905ರಲ್ಲಿ ಕಲ್ಕತ್ತಾ ಟೌನ್ ಹಾಲ್ ನಲ್ಲಿ ಬ್ರಿಟಿಷ್ ಸರ್ಕಾರದ ವಿರುದ್ಧ ನಡೆದ ಸ್ವದೇಶಿ ಚಳುವಳಿಯ ಸ್ಮರಣಾರ್ಥ ರಾಷ್ಟ್ರೀಯ ಕೈಮಗ್ಗ ದಿನವನ್ನು ಆಚರಣೆ ಮಾಡಲಾಗುತ್ತದೆ.
ರಾಷ್ಟ್ರೀಯ ಕೈಮಗ್ಗ ದಿನದ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮೂಲಕ ಕೈಮಗ್ಗ ವಲಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಜನರಿಗೆ ಶುಭಾಶಯಗಳನ್ನು ಕೋರಿದ್ದಾರೆ. ಅಲ್ಲದೆ, ಸ್ಥಳೀಯತೆಗೆ ಧ್ವನಿಯಾಗೋಣ ಎಂದು ದೇಶದ ಜನರಿಗೆ ಕರೆ ನೀಡಿದ್ದಾರೆ.
ಟ್ವೀಟ್ ಮಾಡಿರುವ ಮೋದಿ, “ರಾಷ್ಟ್ರೀಯ ಕೈಮಗ್ಗ ದಿನದಂದು, ನಮ್ಮ ವೈವಿಧ್ಯ ಕೈಮಗ್ಗ ಮತ್ತು ಕರಕುಶಲ ವಲಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಜನರಿಗೆ ನಮ್ಮ ನಮನಗಳು. ನಮ್ಮ ಸ್ಥಳೀಯ ಕರಕುಶಲತೆಯನ್ನು ಉಳಿಸುವ ನಿಟ್ಟಿನಲ್ಲಿ ಅವರ ಪ್ರಯತ್ನ ಶ್ಲಾಘನೀಯ. ನಾವು ಸ್ಥಳೀಯತೆಗೆ ಧ್ವನಿಯಾಗುವ ಮತ್ತು ಆತ್ಮನಿರ್ಭರ ಭಾರತದ ಕಡೆಗೆ ನಮ್ಮ ಪ್ರಯತ್ನಗಳನ್ನು ಇನ್ನಷ್ಟು ಬಲಪಡಿಸೋಣ” ಎಂದು ಮೋದಿ ಹೇಳಿದ್ದಾರೆ.
ರಾಷ್ಟ್ರೀಯ ಕೈಮಗ್ಗ ದಿನವು ದೇಶದ ಸಾಮಾಜಿಕ ಆರ್ಥಿಕ ಅಭಿವೃದ್ಧಿಗೆ ಕೈಮಗ್ಗದ ಕೊಡುಗೆಯನ್ನು ಎತ್ತಿ ತೋರಿಸುತ್ತದೆ ಮತ್ತು ನೇಕಾರರ ಆದಾಯವನ್ನು ಹೆಚ್ಚಿಸುವ ಪ್ರಯತ್ನ ನಡೆಸಲು ಪ್ರೇರಣೆ ನೀಡುತ್ತದೆ.
On National Handloom Day, we salute all those associated with our vibrant handloom and handicrafts sector. They have made commendable efforts to preserve the indigenous crafts of our nation. Let us all be #Vocal4Handmade and strengthen efforts towards an Aatmanirbhar Bharat. pic.twitter.com/XD7cs9ES7F
— Narendra Modi (@narendramodi) August 7, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.