ಲಕ್ನೋ: ಕೋಟ್ಯಂತರ ಭಾರತೀಯರ ಐದು ಶತಕಗಳ ರಾಮ ಮಂದಿರದ ಕನಸು ನನಸಾಗುವ ಕಾಲ ಸನ್ನಿಹಿತವಾಗಿದೆ. ಇದಕ್ಕೆ ಪೂರಕವಾಗಿ ಉತ್ತರ ಪ್ರದೇಶದ ರಾಮನ ಜನ್ಮಭೂಮಿ ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಹಿಂದಷ್ಟೇ ಭೂಮಿ ಪೂಜೆಯ ಮೂಲಕ ಶಂಕುಸ್ಥಾಪನೆ ಮಾಡಿದ್ದಾರೆ. ಆ ಮೂಲಕ ಕೋಟ್ಯಂತರ ರಾಮ ಭಕ್ತರ ಕನಸಿಗೆ ಜೀವ ನೀಡುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಿದ್ದಾರೆ.
ವರದಿಗಳ ಪ್ರಕಾರ, ಇಲ್ಲಿ ನಿರ್ಮಾಣವಾಗಲಿರುವ ಭವ್ಯ ದೇವಾಲಯ ಹಲವಾರು ವಿಶೇಷತೆಗಳಿಗೂ ಸಾಕ್ಷಿಯಾಗಲಿದೆ. ಈ ದೇಗುಲ ಭೂಕಂಪನವನ್ನು ತಡೆದುಕೊಳ್ಳುವಷ್ಟು ಪ್ರಬಲ ಮತ್ತು ಶಕ್ತಿಯುತವಾಗಿ ನಿರ್ಮಾಣವಾಗಲಿದೆ ಎಂದು ದೇವಾಲಯದ ವಾಸ್ತುಶಿಲ್ಪಿ ಅಶಿಶ್ ಸಂಪುರ್ಣ ಅವರು ಮಾಹಿತಿ ನೀಡಿದ್ದಾರೆ. ಈ ದೇವಾಲಯ ನಿರ್ಮಾಣಕ್ಕೆ ತಾಮ್ರವನ್ನು ಬಳಕೆ ಮಾಡಲಾಗುವುದು, ಉಕ್ಕು ಬಳಸುವುದಿಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ.
ಗುಜರಾತ್ನ ಪ್ರಸಿದ್ಧ ದೇವಾಲಯ ಸೋಮನಾಥದ ವಿನ್ಯಾಸವನ್ನು ಮಾಡಿದ ವಂಶದವರಾಗಿರುವ ಆಶಿಶ್ ಸಂಪುರ್ಣ ಅವರು ಅಯೋಧ್ಯೆಯ ರಾಮ ಮಂದಿರ ನಿರ್ಮಾಣ ಕಾರ್ಯ ನಡೆಸಲಿದ್ದಾರೆ.
“ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ಸಂಬಂಧಿಸಿದಂತೆ ತಮ್ಮ ತಂದೆಯವರು ಅವರ ಅನುಭವದ ಆಧಾರದಲ್ಲಿ ರೂಪುರೇಶೆಗಳನ್ನು ಸಿದ್ಧಪಡಿಸಿದ್ದರು, ಈಗ ಕೆಲವೊಂದು ಬದಲಾವಣೆಗಳೊಂದಿಗೆ ರಾಮ ಮಂದಿರವನ್ನು ವಿನ್ಯಾಸ ಮಾಡಲಾಗಿದೆ. ಉದ್ದೇಶಿತ ಜಾಗದಲ್ಲಿ ಮಂದಿರ ನಿರ್ಮಾಣಕ್ಕೆ ಬೇಕಾದಷ್ಟು ಸ್ಥಳಾವಕಾಶವಿದ್ದು, ರಾಮ ಮಂದಿರದ ವಿನ್ಯಾಸದಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಕೆಲವು ವಿಶೇಷತೆಗಳನ್ನು ಅಳವಡಿಸಲಾಗುವುದಾಗಿಯೂ ಅವರು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.