ಬೆಂಗಳೂರು: ಕೋವಿಡ್-19 ಸೋಂಕಿನಿಂದಾಗಿ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಜ್ಯದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಬಹುತೇಕ ಚೇತರಿಸಿಕೊಂಡಿದ್ದು, ಇನ್ನೊಂದು ವಾರದಲ್ಲಿಯೇ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ.
ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆಗಸ್ಟ್ 2 ರಂದು ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಸೂಕ್ತ ಚಿಕಿತ್ಸೆಗೆ ಪೂರಕವಾಗಿ ಸ್ಪಂದಿಸಿರುವ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ನಿನ್ನೆಯೂ ಅವರಿಗೆ ಸೋಂಕು ಪರೀಕ್ಷೆ ನಡೆಸಲಾಗಿದ್ದು, ನಾಳೆ ಮತ್ತೊಂದು ಬಾರಿ ಪರೀಕ್ಷೆ ನಡೆಸಲಾಗುತ್ತದೆ. ಈ ಸಂದರ್ಭದಲ್ಲಿ ಅವರ ಫಲಿತಾಂಶ ನೆಗೆಟಿವ್ ಬಂದಲ್ಲಿ, ಮತ್ತೊಂದು ಸುತ್ತಿನ ಆರೋಗ್ಯ ಪರೀಕ್ಷೆ ನಡೆಸಲಾಗುವುದೆಂದೂ ಮೂಲಗಳು ತಿಳಿಸಿವೆ. ಅವರ ದೇಹದಲ್ಲಿರುವ ಆಮ್ಲಜನಕ ಶುದ್ಧತ್ವದ ಪ್ರಮಾಣ 95% ಗೂ ಹೆಚ್ಚಿದ್ದರೆ, ಶ್ವಾಸಕೋಶದ ಪ್ರಮಾಣ ನಿಮಿಷಕ್ಕೆ 24% ದಷ್ಟಿದ್ದರೆ ಯಾವುದೇ ಪರೀಕ್ಷೆ ನಡೆಸದೆಯೇ ಬಿಡುಗಡೆ ಮಾಡುವ ಸಾಧ್ಯತೆಗಳಿವೆ ಎಂದೂ ತಿಳಿದು ಬಂದಿದೆ.
ಲಕ್ಷಣ ರಹಿತ ರೋಗಿಗಳನ್ನು 10 ದಿನಗಳಲ್ಲಿ ಬಿಡುಗಡೆ ಮಾಡಲಾಗುತ್ತದೆ. ಆದರೆ ಯಡಿಯೂರಪ್ಪ ಅವರ ವಯಸ್ಸಿನ ಆಧಾರದಲ್ಲಿ ವೈದ್ಯಕೀಯ ದೃಢೀಕರಣ ವರದಿಗಳ ಬಳಿಕವಷ್ಟೇ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುತ್ತದೆ ಎಂದೂ ಮಾಹಿತಿಗಳಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.