ಬೆಂಗಳೂರು: ಜಾಗತಿಕ ಸಂಕಷ್ಟವಾಗಿ ಪರಿಣಮಿಸಿರುವ ಕೊರೋನಾ ಸೋಂಕಿಗೆ ತುತ್ತಾಗಿ ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಚೇತರಿಸಿಕೊಂಡಿದ್ದು, ಇಂದು ಸಂಜೆ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.
ಕಳೆದ ಆಗಸ್ಟ್ 2 ರಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಅವರ ದೇಹ ಚಿಕಿತ್ಸೆಗೆ ಸರಿಯಾದ ರೀತಿಯಲ್ಲಿ ಸ್ಪಂದಿಸಿತ್ತು. ಲಕ್ಷಣ ರಹಿತ ರೋಗಿಯಾಗಿ ದಾಖಲಾಗಿದ್ದ ಯಡಿಯೂರಪ್ಪ ಅವರ ಕೊರೋನಾ ಪರೀಕ್ಷಾ ವರದಿ ಇದೀಗ ನೆಗೆಟಿವ್ ಬಂದಿದ್ದು, ಅವರನ್ನು ಮನೆಗೆ ಕಳುಹಿಸಿ ಕೊಡಲಾಗಿದೆ. ಮುಂದಿನ ಮೂರು ದಿನಗಳ ಕಾಲ ಅವರು ಮನೆಯಲ್ಲಿಯೇ ವಿಶ್ರಾಂತಿ ಪಡೆಯಲಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ.
ಯಡಿಯೂರಪ್ಪ ಅವರ ಪರೀಕ್ಷಾ ವರದಿ ಬಂದು, ಅವರನ್ನು ಇನ್ನೊಂದು ವಾರದಲ್ಲಿಯೇ ಡಿಸ್ಚಾರ್ಜ್ ಮಾಡಲಾಗುವುದು ಎಂದು ಆಸ್ಪತ್ರೆಯ ಸಿಬ್ಬಂದಿಗಳು ಈ ಹಿಂದೆ ತಿಳಿಸಿದ್ದರು. ಆದರೆ ಪರೀಕ್ಷಾ ವರದಿಯಲ್ಲಿ ನೆಗೆಟಿವ್ ಬಂದಿದ್ದು, ಅವರನ್ನು ಇಂದೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಕಳೆದ 9 ದಿನಗಳಿಂದ ಸಿಎಂ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.