ನವದೆಹಲಿ: ದೇಶೀಯ ಶಸ್ತ್ರಾಸ್ತ್ರಗಳನ್ನು ತಯಾರಿಸಲು ಮತ್ತು ದೇಶವನ್ನು ಸ್ವಾವಲಂಬಿಯಾಗಿ ಮಾಡಲು ಇದು ಸಕಾಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಹೇಳಿದ್ದಾರೆ.
‘ಆತ್ಮ ನಿರ್ಭರ ಸಪ್ತಾಹ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಕ್ಷಣಾ ರಚನೆ, ಹೂಡಿಕೆ ಮೂಲಸೌಕರ್ಯ, ಶಸ್ತ್ರಾಸ್ತ್ರಗಳ ತಯಾರಿಕೆಯಲ್ಲಿ ಭವಿಷ್ಯದಲ್ಲಿ ಭಾರತವನ್ನು ಸ್ವಾವಲಂಬಿಯಾಗಿ ಮಾಡಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದರು.
“ಇಂದಿನ ಕಾರ್ಯಕ್ರಮವು ದೇಶಿಯ ನಿರ್ಮಾಣ ಸಾಮರ್ಥ್ಯಕ್ಕೆ ಸಹಾಯ ಮಾಡುವ ನಿಟ್ಟಿನಲ್ಲಿ ಆಧುನಿಕರಣ, ನವೀಕರಣ ಮತ್ತು ಹೊಸ ಮೂಲಸೌಕರ್ಯಗಳ ಸೌಲಭ್ಯಗಳ ಮೇಲೆ ಗಮನವನ್ನು ಕೇಂದ್ರೀಕರಿಸಿವೆ” ಎಂದಿದ್ದಾರೆ.
101 ಮಿಲಿಟರಿ ಪರಿಕರಗಳನ್ನು ವಿದೇಶದಿಂದ ಆಮದು ಮಾಡಿಕೊಳ್ಳುವುದಿಲ್ಲ ಮತ್ತು ಅವುಗಳನ್ನು ಭಾರತದಲ್ಲಿ ತಯಾರಿಸುವ ಘೋಷಣೆಯನ್ನು ಸರ್ಕಾರ ಮಾಡಿದೆ. ಈ ಬಗ್ಗೆ ನನಗೆ ಅತೀವ ಸಂತೋಷ ಇದೆ ಎಂದಿದ್ದಾರೆ.
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಿನ ಪರಿಕರಗಳ ಮೇಲೆ ನಿರ್ಬಂಧವನ್ನು ಹೇರಲಾಗುವುದು, ಇದರಿಂದ ಕೋಟ್ಯಾಂತರ ರೂಪಾಯಿ ಹಣ ಉಳಿತಾಯವಾಗುತ್ತದೆ. ನಮ್ಮ ರಕ್ಷಣಾ ಪಿಎಸ್ಯುಗಳು, ಅರ್ಡನೆನ್ಸ್ ಫ್ಯಾಕ್ಟರಿಗಳು ಈ ದಿಸೆಯಲ್ಲಿ ಕಾರ್ಯೋನ್ಮುಖಗೊಂಡಿದೆ. ಇವುಗಳೇ ನಮ್ಮ ರಕ್ಷಣಾ ವ್ಯವಸ್ಥೆಯ ಬೆನ್ನೆಲುಬು ಎಂದು ಅವರು ಹೇಳಿದ್ದಾರೆ.
ಭಾರತದಲ್ಲಿ ನಾವು ಉತ್ಪಾದಿಸುವ ಸಾಮರ್ಥ್ಯವನ್ನು ಪಡೆದುಕೊಂಡರೆ, ದೇಶಕ್ಕೆ ಅಪಾರ ಪ್ರಮಾಣದ ಬಂಡವಾಳ ಉಳಿಸಬಹುದಾಗಿದೆ. ಇದರಿಂದ ರಕ್ಷಣೆಗೆ ಸಂಬಂಧಿಸಿದ 7000 ಸಣ್ಣ ಮತ್ತು ಮಧ್ಯಮ ಉದ್ದಿಮೆಗಳಿಗೆ ಉತ್ತೇಜನ ಸಿಗಲಿದೆ ಎಂದು ಅವರು ಹೇಳಿದ್ದಾರೆ.
ಆತ್ಮ ನಿರ್ಭರ ಭಾರತ ಎಂದರೆ ಜಗತ್ತಿನಿಂದ ಸಂಪರ್ಕವನ್ನು ಕಡಿದುಕೊಳ್ಳುವುದು ಎಂದು ಅರ್ಥವಲ್ಲ, ದೇಶಕ್ಕೆ ಸ್ವಾವಲಂಬಿಯಾಗಲು ಇದು ಅತ್ಯಂತ ಪ್ರಮುಖವಾದುದು. ನಮ್ಮ ದೇಶ ಜಗತ್ತಿನೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ಮುನ್ನಡೆಯುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.