ಶ್ರೀನಗರ: ಕೊರೋನಾ ಸೋಂಕು ಜಗತ್ತಿನ ನಿದ್ದೆ ಕೆಡಿಸಿದ್ದು, ಮುಂಜಾಗ್ರತಾ ಕ್ರಮವಾಗಿ ಕಳೆದ 5 ತಿಂಗಳಿನಿಂದ ವೈಷ್ಣೋದೇವಿ ಯಾತ್ರೆಯನ್ನೂ ಜಮ್ಮು ಕಾಶ್ಮೀರದ ಆಡಳಿತ ಸ್ಥಗಿತ ಗೊಳಿಸಿತ್ತು.
ಕೊರೋನಾ ಹರಡದಂತೆ ಎಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಸ್ಥಗಿತಗೊಳಿಸಲಾಗಿದ್ದ ಯಾತ್ರೆಯನ್ನೂ ಇದೀಗ ಅಗತ್ಯ ಪೂರಕ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿಕೊಂಡಂತೆ ಮತ್ತೆ ಪುನರಾರಂಭ ಮಾಡಲಾಗಿದೆ. ಈ ಭಾನುವಾರದಿಂದಲೇ ವೈಷ್ಣೋದೇವಿ ಯಾತ್ರೆಗೆ ಮತ್ತೆ ಅವಕಾಶ ನೀಡಲಾಗಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಕಣಿವೆ ರಾಜ್ಯದ ಸರ್ಕಾರ ಮಾರ್ಗಸೂಚಿಗಳನ್ನೂ ಹೊರಡಿಸಲಾಗಿದೆ. ರಾಜ್ಯವನ್ನು ಹೊರತುಪಡಿಸಿದಂತೆ ಅನ್ಯ ರಾಜ್ಯದ 500 ಜನರಿಗಷ್ಟೇ ಯಾತ್ರೆಗೆ ಅವಕಾಶ ನೀಡಲಾಗುವುದಾಗಿಯೂ ಈ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ದೇಗುಲದ ಸುತ್ತಲೂ ಸ್ಯಾನಿಟೈಸ್ ಮಾಡಲಾಗಿದ್ದು, ಕೊರೋನಾ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಜೊತೆಗೆ ಯಾತ್ರಾತ್ರಿಗಳು ಸಹ ಎಲ್ಲಾ ಮಾರ್ಗಸೂಚಿಗಳನ್ನು ಅನುಸರಿಸುವಂತೆಯೂ ಸೂಚಿಸಲಾಗಿದೆ. ಇನ್ನು ವೈಷ್ಣೋದೇವಿ ಯಾತ್ರೆಗೆ ಬರುವ ಯಾತ್ರಾತ್ರಿಗಳೂ ಆನ್ಲೈನ್ ಮೂಲಕವೇ ನೋಂದಣಿ ಮಾಡಿಕೊಳ್ಳುವಂತೆಯೂ ಸೂಚಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.