ನವದೆಹಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್ ಮಂಗಳವಾರ ಗೋವಾ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರನ್ನು ಮೇಘಾಲಯ ರಾಜ್ಯಪಾಲರನ್ನಾಗಿ ವರ್ಗಾವಣೆ ಮಾಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಮಹಾರಾಷ್ಟ್ರದ ರಾಜ್ಯಪಾಲರಾಗಿರುವ ಭಗತ್ ಸಿಂಗ್ ಕೊಶ್ಯಾರಿಗೆ ಗೋವಾದ ಹೆಚ್ಚುವರಿ ಉಸ್ತುವಾರಿ ನೀಡಲಾಗಿದೆ.
ಮಲಿಕ್ ಅವರನ್ನು ಅಕ್ಟೋಬರ್ 2019 ರಲ್ಲಿ ಗೋವಾ ಗವರ್ನರ್ ಆಗಿ ನೇಮಿಸಲಾಯಿತು. ಈ ಹಿಂದೆ ಅವರು ಹಿಂದಿನ ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. ಆಗಸ್ಟ್ 2019 ರಲ್ಲಿ ಜಮ್ಮು ಮತ್ತು ಕಾಶ್ಮೀರವನ್ನು ಅದರ ವಿಶೇಷ ಸ್ಥಾನಮಾನದಿಂದ ವಿಂಗಡಿಸಿ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದಾಗ ಮಲಿಕ್ ಅಲ್ಲಿ ಚುಕ್ಕಾಣಿ ಹಿಡಿದಿದ್ದರು.
1965 ರಲ್ಲಿ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದ ಮಲಿಕ್ ಅವರು ಮೊದಲು 1980 ರಲ್ಲಿ ಲೋಕದಳದ ಸದಸ್ಯರಾಗಿ ರಾಜ್ಯಸಭೆಗೆ ಆಯ್ಕೆಯಾದರು. 1986 ರಲ್ಲಿ ಅವರು ಮತ್ತೆ ರಾಜ್ಯಸಭೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆಯಾದರು. ಮಲಿಕ್ ಬಳಿಕ ಬಿಜೆಪಿ ಸೇರಿದರು ಮತ್ತು 2005 ರಲ್ಲಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾದರು.
ಗೋವಾಕ್ಕೆ ರಾಜ್ಯಪಾಲರನ್ನು ನೇಮಿಸುವವರೆಗೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಗೋವಾ ರಾಜ್ಯಪಾಲರಾಗಿ ಹೆಚ್ಚುವರಿ ಕರ್ತವ್ಯ ವಹಿಸಿಕೊಳ್ಳಲಿದ್ದಾರೆ ಎಂದು ರಾಷ್ಟ್ರಪತಿ ಭವನ ವಕ್ತಾರರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.