ಬೆಂಗಳೂರು: ಕೊರೋನಾ ಸಂಕಷ್ಟದಿಂದ ಸಮಸ್ಯೆಗೆ ತುತ್ತಾಗಿದ್ದ ಹಲವು ಕ್ಷೇತ್ರಗಳಿಗೆ ರಾಜ್ಯ ಸರ್ಕಾರ ನೆರವು ನೀಡುವ ಸಲುವಾಗಿ ಪರಿಹಾರ ಧನವನ್ನು ಈ ಹಿಂದೆಯೇ ಘೋಷಿಸಿತ್ತು. ಅದರಂತೆ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಕೊರೋನಾ ಪರಿಹಾರ ಧನ ಘೋಷಣೆ ಮಾಡಲಾಗಿದ್ದು, ಈ ಹಿನ್ನೆಲೆಯಲ್ಲಿ ಹೆಚ್ಚುವರಿ 57.51 ಕೋಟಿ ರೂ. ಗಳನ್ನು ಬಿಡುಗಡೆ ಮಾಡಲಾಗಿದೆ.
ಕೊರೋನಾ ಸಂಕಷ್ಟದಿಂದ ಜೀವನ ನಡೆಸಲು ಪರದಾಡುತ್ತಿದ್ದ ಆಟೋ, ಟ್ಯಾಕ್ಸಿ ಚಾಲಕರಿಂದ ಈ ಸಂಬಂಧ ಈ ಹಿಂದೆಯೇ ಅರ್ಜಿ ಆಹ್ವಾನ ಮಾಡಿದ್ದು, ಪೂರ್ಣ ದಾಖಲೆಗಳನ್ನು ನೀಡಿ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವಂತೆಯೂ ಸೂಚಿಸಲಾಗಿತ್ತು. ಸುಮಾರು 2,45,253 ಅರ್ಜಿಗಳನ್ನು ಈ ಮೂಲಕ ಸರ್ಕಾರ ಸ್ವೀಕರಿಸಿತ್ತು.
ಸುಮಾರು 1,19,577 ಫಲಾನುಭವಿಗಳಿಗೆ ಈಗಾಗಲೇ ಡಿಬಿಟಿ ಮುಖಾಂತರ ನೇರವಾಗಿ ಅವರ ಬ್ಯಾಂಕ್ ಖಾತೆಗೆ ಪರಿಹಾರ ಧನವನ್ನು ಈ ಹಿಂದೆಯೇ ಸರ್ಕಾರ ಜಮೆ ಮಾಡಿದೆ. ಉಳಿದಂತೆ ಅರ್ಜಿ ಸಲ್ಲಿಸಿರುವ ಇತರ ಫಲಾನುಭವಿಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಮತ್ತೊಮ್ಮೆ ಹಣ ಬಿಡುಗಡೆ ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.