ನವದೆಹಲಿ: ಕೋವಿಡ್-19 ರೋಗಿಗಳ ಚೇತರಿಕೆಯ ಪ್ರಮಾಣವು ದಿನದಿಂದ ದಿನಕ್ಕೆ ಸುಧಾರಣೆ ಕಾಣುತ್ತಿದೆ ಮತ್ತು ಇಂದು ಈ ಪ್ರಮಾಣ ಶೇಕಡಾ 74 ಕ್ಕೆ ತಲುಪಿದೆ. ಸರ್ಕಾರದ ನಿರಂತರ, ಪೂರ್ವಭಾವಿ ಮತ್ತು ಸಮಯೋಚಿತ ಕ್ರಮಗಳ ಕಾರಣದಿಂದ ದೇಶದ ಸುಮಾರು 21 ಲಕ್ಷ ಜನರು ಕೋವಿಡ್-19 ನಿಂದ ಯಶಸ್ವಿಯಾಗಿ ಚೇತರಿಸಿಕೊಂಡಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಭಾರತ ಸುಮಾರು 59 ಸಾವಿರ ಚೇತರಿಕೆಗಳನ್ನು ದಾಖಲಿಸಿದ್ದು, ಈವರೆಗೆ ದೇಶದಲ್ಲಿ ಒಟ್ಟು 20 ಲಕ್ಷ 96 ಸಾವಿರ 664 ಜನರು ಚೇತರಿಸಿಕೊಂಡಿದ್ದಾರೆ. ಪ್ರಕರಣದ ಸಾವಿನ ಪ್ರಮಾಣವು ಸ್ಥಿರವಾದ ಕುಸಿತವನ್ನು ತೋರಿಸುತ್ತಲೇ ಇದೆ ಮತ್ತು ಈಗ ಅದು ಶೇಕಡಾ 1.90 ರಷ್ಟಿದೆ. ದೇಶದ ಸುಮಾರು 30 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ರಾಷ್ಟ್ರೀಯ ಸರಾಸರಿಗಿಂತ ಕಡಿಮೆ ಸಾವಿನ ಪ್ರಮಾಣವನ್ನು ಹೊಂದಿವೆ.
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಸುಮಾರು 69 ಸಾವಿರ ಹೊಸ ಕೋವಿಡ್ -19 ಪ್ರಕರಣಗಳು ದಾಖಲಾಗಿವೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಒಟ್ಟು ಪ್ರಕರಣಗಳ ಸಂಖ್ಯೆ 28 ಲಕ್ಷ 36 ಸಾವಿರ 926 ಕ್ಕೆ ತಲುಪಿದೆ. ಪ್ರಸ್ತುತ, ದೇಶದಲ್ಲಿ ಒಟ್ಟು ಸಕ್ರಿಯ ಕೊರೋನಾ ಪ್ರಕರಣಗಳ ಸಂಖ್ಯೆ 6 ಲಕ್ಷ 86 ಸಾವಿರ 395. ಒಂದೇ ದಿನದಲ್ಲಿ 977 ಸಾವುಗಳು ಸಂಭವಿಸಿದ್ದು, ಒಟ್ಟು ಸಾವಿನ ಸಂಖ್ಯೆ 53 ಸಾವಿರ 866 ಕ್ಕೆ ತಲುಪಿದೆ ಎಂದು ವರದಿಯಾಗಿದೆ.
ಭಾರತವು ತನ್ನ ಕೋವಿಡ್ ಪರೀಕ್ಷಾ ಸಾಮರ್ಥ್ಯವನ್ನು ನಿರಂತರವಾಗಿ ಹೆಚ್ಚಿಸುತ್ತಿದೆ. ಕಳೆದ 24 ಗಂಟೆಗಳಲ್ಲಿ, ದೇಶವು ಒಂದು ದಿನದಲ್ಲಿ ಹತ್ತಿರ ಹತ್ತಿರ ಒಂದು ಮಿಲಿಯನ್ ಮಾದರಿಗಳನ್ನು ಪರೀಕ್ಷಿಸಿದೆ. ಒಂದು ದಿನದಲ್ಲಿ 9 ಲಕ್ಷಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸುವುದರೊಂದಿಗೆ, ರಾಷ್ಟ್ರವು ಇಂದು ಮತ್ತೊಂದು ಮೈಲಿಗಲ್ಲನ್ನು ಸಾಧಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.