ಟೋಕಿಯೋ: ಜಪಾನ್ ಪ್ರಧಾನಿ ಶಿಂಜೊ ಅಬೆ ಅವರು ಆರೋಗ್ಯ ಸಮಸ್ಯೆಗಳಿಂದಾಗಿ ಪ್ರಧಾನಿ ಸ್ಥಾನದಿಂದ ಕೆಳಗಿಳಿಯಲು ಯೋಜಿಸಿದ್ದಾರೆ ಎಂದು ಅಲ್ಲಿನ ಸರ್ಕಾರಿ ಮಾಧ್ಯಮ ಶುಕ್ರವಾರ ವರದಿ ಮಾಡಿದೆ.
ಜಪಾನ್ನ ರಾಷ್ಟ್ರೀಯ ಮಾಧ್ಯಮ ಎನ್ಎಚ್ಕೆ ವರದಿಯ ಪ್ರಕಾರ, ಅಬೆ ಅವರ ನಿರ್ಧಾರದ ಕುರಿತು ಹೆಚ್ಚಿನ ವಿವರಗಳನ್ನು ನೀಡಲು ಶೀಘ್ರದಲ್ಲೇ ಸುದ್ದಿಗೋಷ್ಠಿ ನಡೆಸಲು ನಿರ್ಧರಿಸಲಾಗಿದೆ.
ಕಳೆದ ಎರಡು ವಾರಗಳಲ್ಲಿ ಅಬೆ ಅವರು ಟೋಕಿಪ್ ಆಸ್ಪತ್ರೆಗೆ ಎರಡು ಬಾರಿ ಭೇಟಿ ನೀಡಿದ್ದಾರೆ. ನಂತರ ಅಧಿಕಾರದಿಂದ ಕೆಳಗಿಳಿಯಲು ನಿರ್ಧರಿಸಿರುವ ಈ ಬೆಳವಣಿಗೆ ಸಂಭವಿಸಿದೆ, ಅವರ ಆರೋಗ್ಯ ಪರಿಸ್ಥಿತಿ ತೀರಾ ಹದಗೆಟ್ಟಿದೆ ಎಂಬ ಬಗ್ಗೆ ಕೂಡ ಊಹಾಪೋಹಗಳು ಹಬ್ಬಿವೆ.
ವೈದ್ಯಕೀಯ ಕಾರಣಕ್ಕಾಗಿ ಅವರು ತಮ್ಮ ಪ್ರಧಾನಿ ಹುದ್ದೆಯಿಂದ ಕೆಳಗಿಳಿಯುವುದು ಇದು ಎರಡನೇ ಬಾರಿ.
ಕರುಳಿನ ಕಾಯಿಲೆಯಿಂದಾಗಿ ಅವರು 2007 ರಲ್ಲಿ ರಾಜೀನಾಮೆ ನೀಡಿದ್ದರು, ಕೇವಲ ಒಂದು ವರ್ಷ ಅಧಿಕಾರದಲ್ಲಿದ್ದ ಬಳಿಕ ರಾಜೀನಾಮೆ ನೀಡಿದ್ದರು.
ಭರ್ಜರಿ ಚುನಾವಣಾ ಗೆಲುವಿನ ನಂತರ ಅವರು 2012 ರಲ್ಲಿ ಮತ್ತೆ ಪ್ರಧಾನಿ ಹುದ್ದೆಗೆ ಮರಳಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.