ನವದೆಹಲಿ: ಪಾಕಿಸ್ಥಾನದ ಇಂಟರ್ ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ)ನ ಏಜೆಂಟನಾಗಿ ಕೆಲಸ ಮಾಡುತ್ತಿದ್ದ ಗುಜರಾತ್ ಕಛ್ನ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಸೋಮವಾರ ತಿಳಿಸಿದೆ.
ಉತ್ತರಪ್ರದೇಶದ ರಕ್ಷಣಾ / ಐಎಸ್ಐ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಪಶ್ಚಿಮ ಕಛ್ನ ಆರೋಪಿ ರಾಜಕ್ಭಾಯ್ ಕುಂಭಾರ್ ಎಂಬಾತನನ್ನು ಭಾನುವಾರ ಬಂಧಿಸಲಾಗಿದೆ ಎಂದು ಎನ್ಐಎ ವಕ್ತಾರರು ತಿಳಿಸಿದ್ದಾರೆ. ಎನ್ಐಎ ಆತನ ನಿವಾಸದಲ್ಲಿ ಶೋಧ ನಡೆಸಿದ ನಾಲ್ಕು ದಿನಗಳ ನಂತರ ಈ ಬಂಧನವಾಗಿದೆ.
ಎನ್ಐಎ ವಕ್ತಾರರ ಪ್ರಕಾರ, ಕುಂಭಾರ್ ಮುಂಡ್ರಾ ಡಾಕ್ ಯಾರ್ಡ್ನಲ್ಲಿ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಐಎಸ್ಐಗಾಗಿ ಬೇಹುಗಾರಿಕೆ ಮಾಡುತ್ತಿದ್ದ ಎನ್ನಲಾಗಿದೆ. ಉತ್ತರ ಪ್ರದೇಶದ ಚಂಡೌಲಿ ಜಿಲ್ಲೆಯ ನಿವಾಸಿ ಮೊಹಮ್ಮದ್ ರಶೀದ್ ಬಂಧನದ ಬಳಿಕ ಈತನ ಕುಕೃತ್ಯ ಬೆಳಕಿಗೆ ಬಂದಿದೆ.
ರಶೀದ್ ವಿರುದ್ಧ ಎನ್ಐಎ ಈ ವರ್ಷ ಏಪ್ರಿಲ್ 6 ರಂದು ಭಾರತೀಯ ದಂಡ ಸಂಹಿತೆ ಮತ್ತು ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆಯ ಹಲವಾರು ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿತ್ತು. ತನಿಖೆಯ ವೇಳೆ ಆರೋಪಿ ರಶೀದ್ ಪಾಕಿಸ್ಥಾನದ ರಕ್ಷಣಾ / ಐಎಸ್ಐ ನಿರ್ವಹಕರೊಂದಿಗೆ ಸಂಪರ್ಕದಲ್ಲಿದ್ದ ಮತ್ತು ಎರಡು ಬಾರಿ ಪಾಕಿಸ್ಥಾನಕ್ಕೆ ಭೇಟಿ ನೀಡಿದ್ದ ಎಂಬುದು ತಿಳಿದು ಬಂದಿದೆ ಎಂದು ವಕ್ತಾರರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.