ಬೆಂಗಳೂರು: ಇತ್ತೀಚೆಗಷ್ಟೇ ಕರ್ನಾಟಕವೂ ಸೇರಿದಂತೆ ಇಡೀ ದೇಶದಲ್ಲೇ ಸಂಚಲನ ಸೃಷ್ಟಿಸಿದ್ದ ಬೆಂಗಳೂರು ಡಿಜೆ ಹಳ್ಳಿ, ಕೆಜಿ ಹಳ್ಳಿ, ಕಾವಲ್ಭೈರಸಂದ್ರದ ಗಲಭೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಗೃಹ ಇಲಾಖೆಗೆ ರಾಜ್ಯ ಸರ್ಕಾರ ವರದಿ ಸಲ್ಲಿಸಿದೆ.
ಕಾಂಗ್ರೆಸ್ ಪಕ್ಷದ ನಾಯಕ ಅಖಂಡ ಶ್ರೀನಿವಾಸ ಎಂಬವರ ಅಳಿಯ ನವೀನ್ ಎಂಬಾತ ಮೊಹಮ್ಮದ್ ಫೈಗಂಬರ್ನ ವಿರುದ್ಧ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿದ್ದು, ಆತನ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರು ವಿಳಂಬ ನೀತಿ ಅನುಸರಿಸಿದ್ದಾರೆ ಎಂದು ಆರೋಪಿಸಿ ನೂರಾರು ಜನರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ, ಶಾಸಕರ ಮನೆಗೆ ಬೆಂಕಿ ಹಚ್ಚಿ, ಪೊಲೀಸ್ ವಾಹನ, ಠಾಣೆಗೆ ಹಾನಿಗೊಳಿಸಿ, ಪೊಲೀಸರ ಮೇಲೆಯೂ ಹಲ್ಲೆ ನಡೆಸಿದ್ದರು.
ಈ ಗಲಭೆಯ ಹಿಂದೆ ಎಸ್ಡಿಪಿಐನ ಕೈವಾಡವಿದೆ ಎಂಬ ಆರೋಪವೂ ಇದೆ. ಆದ್ದರಿಂದ ಈ ಸಂಘಟನೆಯ ನಿಷೇಧಕ್ಕೂ ಒತ್ತಡಗಳಿತ್ತು. ಅದರಂತೆ ಗಲಭೆಯ ಹಿಂದೆ ಕಾಂಗ್ರೆಸ್ ಕೈಗಳು ಕೆಲಸ ಮಾಡಿರುವ ಬಗ್ಗೆಯೂ ಅನುಮಾನಗಳಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 300 ಕ್ಕೂ ಅಧಿಕ ಜನರನ್ನು ಬಂಧಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮ್ಯಾಜಿಸ್ಟ್ರೇಟ್ ತನಿಖೆ ನಡೆಸುತ್ತಿದ್ದಾರೆ ಎಂದು ಗೃಹ ಇಲಾಖೆಗೆ ಮಾಹಿತಿ ನೀಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.