ನವದೆಹಲಿ: ಫೆಬ್ರವರಿ ತಿಂಗಳಲ್ಲಿ ಉತ್ತರ ದೆಹಲಿಯಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದ್ದ ಜೆಎನ್ಯು ವಿದ್ಯಾರ್ಥಿ ಶಾರ್ಜಿಲ್ ಇಮಾಮ್ನನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲು ದೆಹಲಿ ಕೋರ್ಟ್ ಆದೇಶ ನೀಡಿದೆ.
ಆರೋಪಿ ಶಾರ್ಜಿಲ್ನ ಪೊಲೀಸ್ ಕಸ್ಟಡಿ ಅವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ದೆಹಲಿಯ ಹೈಕೋರ್ಟ್ ಈ ಆದೇಶವನ್ನು ನೀಡಿದೆ. ಆರೋಪಿಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು.
ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಪ್ರತಿಭಟನೆಯಲ್ಲಿ ದೇಶದ್ರೋಹಿ ಹೇಳಿಕೆ, ಪ್ರಚೋದನಕಾರಿ ಮಾತುಗಳನ್ನಾಡಿದ ಆರೋಪದ ಮೇಲೆ ಈತನನ್ನು ಬಿಹಾರದ ಜಿಹಾನಾಬಾದ್ ಜಿಲ್ಲೆಯ ಕಾಕೊ ಬಳಿ ಆಗಸ್ಟ್ 25 ರಂದು ಪೊಲೀಸರು ವಶಕ್ಕೆ ಪಡೆದಿದ್ದರು. ಆ ಬಳಿಕ ಐದು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿತ್ತು. ಆದರೆ ಸದ್ಯ ಪೊಲೀಸ್ ಕಸ್ಟಡಿ ಮುಗಿದ ಹಿನ್ನೆಲೆಯಲ್ಲಿ ಆತನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ನ್ಯಾಯಾಲಯ ಆತನಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.