ನವದೆಹಲಿ: ಭಾರತವು ಇಲ್ಲಿಯವರೆಗೆ ಕೋವಿಡ್-19 ನಿಂದ 32 ಲಕ್ಷ 50 ಸಾವಿರಕ್ಕೂ ಹೆಚ್ಚಿನ ಚೇತರಿಕೆ ದಾಖಲಿಸಿದೆ ಮತ್ತು ಕಳೆದ 24 ಗಂಟೆಗಳಲ್ಲಿ 70 ಸಾವಿರ ರೋಗಿಗಳು ಸಾಂಕ್ರಾಮಿಕ ಕಾಯಿಲೆಯಿಂದ ಚೇತರಿಸಿಕೊಂಡಿದ್ದಾರೆ. ಒಟ್ಟಾರೆ ಚೇತರಿಕೆ ಪ್ರಮಾಣ ಶೇಕಡಾ 77.31 ರಷ್ಟಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಒಂದು ತಿಂಗಳ ಅವಧಿಯಲ್ಲಿ ದೇಶದಲ್ಲಿ ಚೇತರಿಸಿಕೊಂಡ ರೋಗಿಗಳ ಸಂಖ್ಯೆ ಮೂರು ಪಟ್ಟು ಹೆಚ್ಚಾಗಿದೆ ಎಂದು ಸಚಿವಾಲಯ ತಿಳಿಸಿದೆ. ಚೇತರಿಸಿಕೊಂಡ ರೋಗಿಗಳ ಸಂಖ್ಯೆ ಸಕ್ರಿಯ ಪ್ರಕರಣಗಳನ್ನು ಸುಮಾರು 3.7 ಪಟ್ಟು ಹಿಂದಿಕ್ಕಿದೆ.
‘ಟೆಸ್ಟ್, ಟ್ರ್ಯಾಕ್ ಮತ್ತು ಟ್ರೀಟ್’ ವಿಧಾನದ ಪರಿಣಾಮಕಾರಿ ಅನುಷ್ಠಾನವು ಹೆಚ್ಚಿನ ಚೇತರಿಕೆ ಮತ್ತು ಕಡಿಮೆ ಮರಣ ಪ್ರಮಾಣಕ್ಕೆ ಕಾರಣವಾಗಿದೆ. ಪ್ರಸ್ತುತ, ಭಾರತದ ಸಾವಿನ ಪ್ರಕರಣಗಳ ಪ್ರಮಾಣವು ಶೇಕಡಾ 1.70 ರಷ್ಟಿದೆ.
ಕಳೆದ 24 ಗಂಟೆಗಳಲ್ಲಿ, 90 ಸಾವಿರ 802 ಹೊಸ ಪ್ರಕರಣಗಳು ದಾಖಲಾಗಿದ್ದು, ಹೀಗಾಗಿ ಒಟ್ಟು ಪ್ರಕರಣ 42 ಲಕ್ಷ 4 ಸಾವಿರದ 614 ಕ್ಕೆ ತಲುಪಿದೆ ಎಂದು ವರದಿಯಾಗಿದೆ. ಮಹಾರಾಷ್ಟ್ರ, ಆಂಧ್ರಪ್ರದೇಶ, ಕರ್ನಾಟಕ, ತಮಿಳುನಾಡು ಮತ್ತು ಉತ್ತರ ಪ್ರದೇಶ ಒಟ್ಟಾಗಿ ಶೇ.50ರಷ್ಟು ಪ್ರಕರಣ ಹೊಂದಿದೆ.
ಪ್ರಸ್ತುತ, ದೇಶದಲ್ಲಿ ಒಟ್ಟು ಸಕ್ರಿಯ ಕೊರೋನಾ ಪ್ರಕರಣಗಳ ಸಂಖ್ಯೆ 8 ಲಕ್ಷ 82 ಸಾವಿರ ಮತ್ತು 542. ಕಳೆದ 24 ಗಂಟೆಗಳಲ್ಲಿ, ಒಂದು ಸಾವಿರ 16 ಸಾವುಗಳು ಸಂಭವಿಸಿದ್ದು, ಇದು ಒಟ್ಟು ಸಾವನ್ನು 71 ಸಾವಿರ 642 ಕ್ಕೆ ತಲುಪಿಸಿದೆ ಎಂದು ವರದಿಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.