ಟೊಕಿಯೋ: ಚೀನಾದ ವಿಸ್ತರಣಾವಾದವನ್ನು ಎದುರಿಸಲು ಭಾರತ-ಪೆಸಿಫಿಕ್ ಪ್ರದೇಶದಲ್ಲಿ ಹೆಚ್ಚಿನ ಸಹಕಾರದ ಅಗತ್ಯವಿದೆ ಎಂದು ಜಪಾನ್ ರಕ್ಷಣಾ ಸಚಿವ ಟಾರೊ ಕೊನೊ ಅಭಿಪ್ರಾಯಿಸಿದ್ದಾರೆ.
ಟೋಕಿಯೊದಲ್ಲಿ ವಾಷಿಂಗ್ಟನ್ ಮೂಲದ ಸೆಂಟರ್ ಫಾರ್ ಸ್ಟ್ರಾಟೆಜಿಕ್ & ಇಂಟರ್ನ್ಯಾಷನಲ್ ಸ್ಟಡೀಸ್ ನಡೆಸಿದ ವೆಬ್ನಾರ್ನಲ್ಲಿ ಮಾತನಾಡಿದ ಕೊನೊ, ಚೀನಾವನ್ನು ಎದುರಿಸಲು ದೊಡ್ಡ ಪ್ರಾದೇಶಿಕ ಕಾರ್ಯವಿಧಾನ ಅಥವಾ ಜಾಗತಿಕ ಕಾರ್ಯವಿಧಾನವನ್ನು ರೂಪಿಸುವ ಅಗತ್ಯತೆಯನ್ನು ಅವರು ಸಾರಿ ಹೇಳಿದ್ದಾರೆ.
ಇಂಡೋ ಪೆಸಿಫಿಕ್ ಪ್ರದೇಶವನ್ನು ಹೆಚ್ಚಾಗಿ ಹಿಂದೂ ಮಹಾಸಾಗರ ಮತ್ತು ದಕ್ಷಿಣ ಚೀನಾ ಸಮುದ್ರ ಸೇರಿದಂತೆ ಪಶ್ಚಿಮ ಮತ್ತು ಮಧ್ಯ ಪೆಸಿಫಿಕ್ ಮಹಾಸಾಗರವನ್ನು ಒಳಗೊಂಡಿರುವ ಪ್ರದೇಶವೆಂದು ನೋಡಲಾಗುತ್ತದೆ.
ದಕ್ಷಿಣ ಚೀನಾ ಸಮುದ್ರದಲ್ಲಿನ ಚೀನಾದ ಪ್ರಾದೇಶಿಕ ಪ್ರತಿಪಾದನೆ, ಹಿಂದೂ ಮಹಾಸಾಗರವನ್ನು ಅತಿಕ್ರಮಿಸುವ ಅದರ ಹುನ್ನಾರ ಸ್ಥಾಪಿತ ನಿಯಮ-ಆಧಾರಿತ ವ್ಯವಸ್ಥೆಯನ್ನು ಪ್ರಶ್ನಿಸುವಂತೆ ಮಾಡಿದೆ ಎಂದು ಅವರು ಹೇಳಿದ್ದಾರೆ..
ವಿಯೆಟ್ನಾಂ, ಫಿಲಿಪೈನ್ಸ್, ಮಲೇಷ್ಯಾ, ಬ್ರೂನಿ ಮತ್ತು ತೈವಾನ್ ದಕ್ಷಿಣ ಚೀನಾ ಸಮುದ್ರದಲ್ಲಿ ತಮ್ಮ ಹಕ್ಕುಗಳನ್ನು ಪ್ರತಿಪಾದಿಸಿವೆ.
ಇತ್ತೀಚಿನ ವರ್ಷಗಳಲ್ಲಿ, ಜಪಾನ್ ಈ ಪ್ರದೇಶದಲ್ಲಿನ ಬೀಜಿಂಗ್ ಚಟುವಟಿಕೆಗಳ ಬಗ್ಗೆ ಹೆಚ್ಚಿನ ಕಳವಳವನ್ನು ವ್ಯಕ್ತಪಡಿಸಿದೆ, ವಿಶೇಷವಾಗಿ ವಿವಾದಿತ ಸೆನ್ಕಾಕು ದ್ವೀಪಗಳ ಪರಿಸ್ಥಿತಿಯ ಬಗ್ಗೆ ಹೆಚ್ಚು ಕಳವಳ ವ್ಯಕ್ತಪಡಿಸಿದೆ. ಚೀನಾದಲ್ಲಿ ಇದನ್ನು ಡಯೋಯುಡಾವೊ ದ್ವೀಪಗಳು ಎಂದು ಕರೆಯಲಾಗುತ್ತದೆ ಮತ್ತು ಚೀನಾ ಇದನ್ನು ತನ್ನ ಭೂಪ್ರದೇಶವೆಂದು ಹೇಳಿಕೊಳ್ಳುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.