ಭೋಪಾಲ್: ಮಧ್ಯಪ್ರದೇಶದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆ (ಗ್ರಾಮೀಣ) ಅಡಿಯಲ್ಲಿ ನಿರ್ಮಿಸಲಾದ 1.75 ಲಕ್ಷ ಮನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಿದರು.
ವಿಡಿಯೋ ಕಾನ್ಫರೆನ್ಸ್ ಮೂಲಕ ಮನೆಗಳನ್ನು ಉದ್ಘಾಟಿಸಿದ ಮೋದಿ, ಈ ಯೋಜನೆಯಡಿ ಸವಲತ್ತುಗಳನ್ನು ಪಡೆದ ಧಾರ್, ಸಿಂಗ್ರೌಲಿ ಮತ್ತು ಗ್ವಾಲಿಯರ್ ಪ್ರದೇಶಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.
ಸಮಾರಂಭದಲ್ಲಿ ಪಿಎಂ ಮೋದಿ ಅವರು, ಪ್ರಧಾನ್ ಮಂತ್ರಿ ಆವಾಸ್ ಯೋಜನೆ (ಪಿಎಂಎವೈ) ಕೇವಲ ಮನೆಗಳನ್ನು ನಿರ್ಮಿಸುವುದಲ್ಲ, ಅದು ಆತ್ಮವಿಶ್ವಾಸವನ್ನು ಬೆಳೆಸುವುದು ಮತ್ತು ಬಡವರಿಗೆ ಸಬಲೀಕರಣ ನೀಡುವುದಾಗಿ ಎಂದು ಅಭಿಪ್ರಾಯಿಸಿದ್ದಾರೆ.
“ಕೊರೋನಾನವೈರಸ್ ಸಾಂಕ್ರಾಮಿಕ ಸಮಯದಲ್ಲಿ, ಪಿಎಂಎವೈ ಅಡಿಯಲ್ಲಿ ಮನೆಗಳನ್ನು ಕೇವಲ 45 ರಿಂದ 60 ದಿನಗಳಲ್ಲಿ ನಿರ್ಮಿಸಲಾಗಿದೆ, ಇದು ವಿಪತ್ತನ್ನು ಒಂದು ಅವಕಾಶವಾಗಿ ಪರಿವರ್ತಿಸಿರುವುದಕ್ಕೆ ಉತ್ತಮ ಉದಾಹರಣೆಯಾಗಿದೆ” ಎಂದಿದ್ದಾರೆ.
ಸ್ವಾವಲಂಬನೆಯನ್ನು ಪುನರುಚ್ಚರಿಸಿದ ಮೋದಿ, ಭಾರತದ ಆರ್ಥಿಕತೆಯನ್ನು ಹೆಚ್ಚಿಸಲು ನಿರ್ಮಾಣ ಮತ್ತು ಉತ್ಪಾದನಾ ಯೋಜನೆಗಳಲ್ಲಿ ಸ್ಥಳೀಯ ಸರಕುಗಳ ಬಳಕೆಯನ್ನು ಸರ್ಕಾರ ಖಾತ್ರಿಪಡಿಸುತ್ತಿದೆ ಎಂದು ಹೇಳಿದರು. ಉಪಕರಣಗಳಿಂದ ಹಿಡಿದು ನಿರ್ಮಾಣದವರೆಗೆ, ಸ್ಥಳೀಯ ಮಟ್ಟದಲ್ಲಿ ಲಭ್ಯವಿರುವ ಮತ್ತು ಉಪಯೋಗಕ್ಕೆ ಬರುವ ವಸ್ತುಗಳಿಗೆ ಪ್ರಥಮ ಆದ್ಯತೆ ನೀಡಲಾಗುತ್ತಿದೆ ಎಂದಿದ್ದಾರೆ.
ಇಂದು ನಡೆದ ಕಾರ್ಯಕ್ರಮದಲ್ಲಿ ಮಧ್ಯಪ್ರದೇಶ ರಾಜ್ಯಪಾಲ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್, ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್, ಬಿಜೆಪಿ ಸಂಸದ ಜ್ಯೋತಿರಾದಿತ್ಯ ಸಿಂಧಿಯಾ ಸೇರಿದಂತೆ ಇತರರು ಭಾಗವಹಿಸಿದ್ದರು.
“ಪ್ರಧಾನಿ ಮೋದಿಯವರ ನೇತೃತ್ವದಲ್ಲಿ, ನಾವು 20 ಲಕ್ಷ ಮನೆಗಳಲ್ಲಿ 17 ಲಕ್ಷಗಳನ್ನು ನಿರ್ಮಿಸಿದ್ದೇವೆ. ದೇಶದ ಪ್ರತಿಯೊಬ್ಬ ಬಡವರಿಗೆ ಸ್ವಂತ ಮನೆ ಇರಬೇಕು ಎಂಬುದು ಪ್ರಧಾನಮಂತ್ರಿಯ ಕನಸು. ಅವರ ಆಶೀರ್ವಾದದಿಂದ ಮಧ್ಯಪ್ರದೇಶ ಈ ದಿಕ್ಕಿನಲ್ಲಿ ವೇಗವಾಗಿ ಮುನ್ನಡೆಯುತ್ತಿದೆ” ಎಂದು ಚೌವ್ಹಾಣ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.