
ನವದೆಹಲಿ: ಕೊರೋನಾ ಸಾಂಕ್ರಾಮಿಕ ರೋಗ ಉಲ್ಬಣಗೊಳ್ಳುತ್ತಿರುವ ಈ ಸಂದರ್ಭದಲ್ಲಿ, ಇಂದು ರಾಜ್ಯಸಭೆಯಲ್ಲಿ ‘ಸಾಂಕ್ರಾಮಿಕ ರೋಗ ತಿದ್ದುಪಡಿ ಮಸೂದೆ, 2020’ ಅನ್ನು ಅನುಮೋದಿಸಲಾಗಿದೆ. ಆರೋಗ್ಯ ಕಾರ್ಯಕರ್ತರ ಮೇಲಿನ ದೌರ್ಜನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಮಸೂದೆಯನ್ನು ತರಲಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಅವರು, “ಆರೋಗ್ಯ ಕಾರ್ಯಕರ್ತರು ಮತ್ತು ಆರೋಗ್ಯ ವೃತ್ತಿಪರರು ಮೇಲಿನ ದೌರ್ಜನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಮಸೂದೆ ತರಲಾಗಿದೆ. ಕೊರೋನಾ ವಿರುದ್ಧ ಹೋರಾಡುತ್ತಿರುವ ಅಥವಾ ಇಂಥಹುದೇ ಯಾವುದೇ ಸಾಂಕ್ರಾಮಿಕ ಪರಿಸ್ಥಿತಿಯ ವಿರುದ್ಧ ಹೋರಾಡುವ ವೈದ್ಯರು ಮತ್ತು ಇತರ ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸುವವರಿಗೆ ಐದು ವರ್ಷಗಳ ಸೆರೆವಾಸವನ್ನು ವಿಧಿಸಲಾಗುತ್ತದೆ” ಎಂದಿದ್ದಾರೆ.
“ದೇಶದಲ್ಲಿ ಅನೇಕ ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರು ಒಂದಲ್ಲ ಒಂದು ರೀತಿಯಲ್ಲಿ ಅವಮಾನವನ್ನು ಎದುರಿಸುತ್ತಿದ್ದಾರೆ. ಇದಕ್ಕೆ ಕೋವಿಡ್-19 ಬಗೆಗೆ ಇರುವ ತಪ್ಪು ಕಲ್ಪನೆ ಕಾರಣ. ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಂಡಿರುವ ಕೇಂದ್ರ ಸರ್ಕಾರವು, ಇಂತಹ ಘಟನೆಗಳನ್ನು ನಡೆಯದಂತೆ ತಡೆಯಲು ಕಾನೂನು ತಂದಿದೆ” ಎಂದಿದ್ದಾರೆ.
ಆರೋಗ್ಯ ಕಾರ್ಯಕರ್ತರು ಮತ್ತು ವೃತ್ತಿಪರರ ಮೇಲಿನ ದೌರ್ಜನ್ಯವನ್ನು ತಡೆಗಟ್ಟಲು ಕೇಂದ್ರ ಸರಕಾರವು ಸುಗ್ರೀವಾಜ್ಞೆಯನ್ನು ತಂದಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


