ನವದೆಹಲಿ: ಕರ್ನಾಟಕ ರಾಜ್ಯದ ಬೆಂಗಳೂರಿನಲ್ಲಿ ಉಗ್ರ ಚಟುವಟಿಕೆಗಳು, ವಿಧ್ವಂಸಕ ಕೃತ್ಯಗಳಂತಹ ಘಟನೆಗಳು ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶಾಶ್ವತ ಎನ್ಐಎ (ರಾಷ್ಟ್ರೀಯ ತನಿಖಾ ಸಂಸ್ಥೆ) ವಿಭಾಗವನ್ನು ಸ್ಥಾಪನೆ ಮಾಡಲು ಬಿಜೆಪಿ ರಾಷ್ಟ್ರೀಯ ಯುವಮೋರ್ಚಾ ಅಧ್ಯಕ್ಷ, ಸಂಸದ ತೇಜಸ್ವಿ ಸೂರ್ಯ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಶಾ ಮತ್ತು ತೇಜಸ್ವಿ ಅವರ ನಡುವಿನ ಭೇಟಿಯ ಸಂದರ್ಭದಲ್ಲಿ ಇತ್ತೀಚೆಗಷ್ಟೇ ನಡೆದಿದ್ದ ಬೆಂಗಳೂರು ಗಲಭೆಗೆ ಸಂಬಂಧಿಸಿದಂತೆ ಮಾತುಕತೆ ನಡೆದಿದ್ದು, ಇದೇ ಸಂದರ್ಭದಲ್ಲಿ ತೇಜಸ್ವಿ ಸೂರ್ಯ ಬೆಂಗಳೂರಿನಲ್ಲಿ ಶಾಶ್ವತ ಎನ್ಐಎ ಕಛೇರಿ ಆರಂಭ ಮಾಡುವಂತೆ ಮನವಿ ಸಲ್ಲಿಸಿದ್ದರು. ಅವರ ಮನವಿಯನ್ನು ಕೇಂದ್ರ ಸರ್ಕಾರ ಪುರಸ್ಕರಿಸಿದ್ದು, ರಾಜ್ಯದಲ್ಲಿ ಎನ್ಐಎ ಕಛೇರಿ ಸ್ಥಾಪನೆಗೆ ಒಪ್ಪಿಗೆ ಸೂಚಿಸಿರುವುದಾಗಿ ತಿಳಿದು ಬಂದಿದೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಉಗ್ರ ಸಂಘಟನೆಗಳ ದಾಳಿಯನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಈ ಮನವಿ ಸಲ್ಲಿಸಲಾಯಿತು ಎಂದೂ ತೇಜಸ್ವಿ ಅವರು ಮಾಹಿತಿ ನೀಡಿದ್ದಾರೆ.
ಸಮಾಜ ವಿದ್ರೋಹಿ ಕೆಲಸಗಳನ್ನು ಮಾಡುತ್ತಿರುವ ಉಗ್ರ ಸಂಘಟನೆಗಳು, ಉಗ್ರ ಕೃತ್ಯಗಳನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಶಾಶ್ವತ ಎನ್ಐಎ ಕಛೇರಿಗೆ ಬೇಡಿಕೆ ಸಲ್ಲಿಸಲಾಗಿದೆ. ಅದರ ಜೊತೆಗೆ ಬೆಂಗಳೂರಿನ ರೋಸ್ ಈರುಳ್ಳಿ ರಫ್ತು ರದ್ದು ಮಾಡದಂತೆಯೂ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ರಾಜ್ಯದ ಬಡ ಜನರಿಗೆ ವಸತಿ ಯೋಜನೆಯಡಿ ಮತ್ತಷ್ಟು ಮನೆಗಳನ್ನು ಮಂಜೂರು ಮಾಡಲು ಬೇಡಿಕೆ ಸಲ್ಲಿಸಲಾಗಿದೆ ಎಂದು ಸಂಸದರು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.