ಬೆಂಗಳೂರು: ಹಿರಿಯ ನಾಗರಿಕರಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ, ಸೌಲಭ್ಯಗಳನ್ನು ದೊರಕಿಸಿಕೊಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅನೇಕ ಕ್ರಮಗಳನ್ನು ಕೈಗೊಂಡಿದೆ ಎಂದು ಸಚಿವ ಶ್ರೀರಾಮುಲು ತಿಳಿಸಿದ್ದಾರೆ.
ವಿಶ್ವ ಹೃದಯ ದಿನದ ಅಂಗವಾಗಿ ಮಾತನಾಡಿದ ಅವರು, ರಕ್ತದೊತ್ತಡ ನಿಯಂತ್ರಣಕ್ಕಾಗಿ ರಾಜ್ಯದ ರಾಯಚೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂಡಿಯಾ ಹೈಪರ್ಟೆನ್ಶನ್ ಕಂಟ್ರೋಲ್ ಇನೀಶಿಯೇಟಿವ್ ಕಾರ್ಯಕ್ರಮ ಆರಂಭಿಸುವುದಾಗಿಯೂ ಅವರು ಮಾಹಿತಿ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ಹಲವರು ಬಲಿಯಾಗುತ್ತಿದ್ದಾರೆ. ಇಂತಹ ಸಮಸ್ಯೆಯಿಂದ ಕೊಂಚ ಮಟ್ಟಿಗಾದರೂ ನಮ್ಮನ್ನು ನಾವು ಕಾಪಾಡಬೇಕಾದರೆ ಧೂಮಪಾನ, ಮದ್ಯಪಾನ ಮೊದಲಾದ ದುಶ್ಚಟಗಳಿಗೆ ದಾಸರಾಗಬಾರದು ಎಂದು ಅವರು ನುಡಿದಿದ್ದಾರೆ.
ಹಾಗೆಯೇ ವರ್ಷಕ್ಕೆ ಒಂದು ಬಾರಿಯಾದರೂ ಬಿಪಿ, ಡಯಾಬಿಟಿಸ್ ಪರೀಕ್ಷೆ ಮಾಡಿಸಿಕೊಳ್ಳುವಂತೆಯೂ ಅವರು ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ವೈದ್ಯಕೀಯ ಕಾಲೇಜುಗಳಿಂದ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳ ವರೆಗೆ ಎಲ್ಲಾ ರೀತಿರ ಆರೋಗ್ಯ ರಕ್ಷಕ ಕ್ರಮಗಳನ್ನು ಜಾರಿಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಬೆಂಬಲ ನೀಡಲು ವಿಶ್ವ ಆರೋಗ್ಯ ಸಂಸ್ಥೆಯು ಹೃದಯ ರಕ್ತನಾಳದ ಆರೋಗ್ಯ ಅಧಿಕಾರಿಯನ್ನು ನೀಡಿದೆ. ಹಾಗೆಯೇ ಐಸಿಎಂಆರ್ ಇಬ್ಬರು ಚಿಕಿತ್ಸಾ ಮೇಲ್ವಿಚಾರಕರನ್ನೂ ಅನುಮೋದಿಸಿದೆ ಎಂದು ಶ್ರೀರಾಮುಲು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.