ನವದೆಹಲಿ: ಉಗ್ರ ಯಾಕುಬ್ ಮೆಮೋನ್ಗೆ ಗಲ್ಲು ಶಿಕ್ಷೆ ನೀಡಿದ ಬಳಿಕ ದೇಶದಲ್ಲಿ ಮರಣದಂಡನೆಯ ಬಗೆಗೆ ಬಿಸಿಬಿಸಿ ಚರ್ಚೆಗಳು ನಡೆಯುತ್ತಿವೆ. ಕೆಲವರು ಗಲ್ಲನ್ನು ನಿಷೇಧಿಸಬೇಕು ಎಂದರೆ, ಇನ್ನು ಕೆಲವರು ಗಲ್ಲು ಅತ್ಯಗತ್ಯ ಎನ್ನುತ್ತಿದ್ದಾರೆ.
ಆದರೆ ಸರ್ಕಾರ ಮಾತ್ರ ಗಲ್ಲು ಶಿಕ್ಷೆಯನ್ನು ನಿಷೇಧಿಸುವ ಯಾವ ಪ್ರಸ್ತಾಪವೂ ನಮ್ಮ ಮುಂದೆ ಇಲ್ಲ ಎಂದು ಸ್ಪಷ್ಟಪಡಿಸಿದೆ. ಅಲ್ಲದೇ ಈ ವಿಷಯದ ಬಗೆಗೆ ವಿಸ್ತೃತ ಸಮಾಲೋಚನೆಗಳು ನಡೆಸುವ ಅಗತ್ಯತೆ ಇದೆ ಎಂದು ಅದು ಹೇಳಿದೆ.
ಯಾಕೂಬ್ ಗಲ್ಲನ್ನು ಕಾಂಗ್ರೆಸ್ ಮುಖಂಡರಾದ ಶಶಿ ತರೂರ್, ದಿಗ್ವಿಜಯ್ ಸಿಂಗ್ ಸೇರಿದಂತೆ ಹಲವರು ವಿರೋಧಿಸಿದ್ದರು, ಈ ಬಗ್ಗೆ ದೇಶದಲ್ಲೇ ದೊಡ್ಡ ಚರ್ಚೆ ನಡೆಯುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.