ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುಖಂಡರ ಹತ್ಯೆಯನ್ನು ಖಂಡಿಸಿ ಇಂದು ಬೆಂಗಳೂರು ಸಂಸದ ಹಾಗೂ ಬಿಜೆಪಿ ರಾಷ್ಟ್ರೀಯ ಯುವಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ನೇತೃತ್ವದಲ್ಲಿ ಕೋಲ್ಕತ್ತಾದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯ ಮೇಲೆ ನಾಡ ಬಾಂಬ್ ಅನ್ನು ಎಸೆಯಲಾಗಿದೆ. ಟಿಎಂಸಿ ಗೂಂಡಾಗಳು ಈ ಕೃತ್ಯ ಎಸಗಿದ್ದಾರೆ ಎಂದು ಶಂಕಿಸಲಾಗಿದೆ.
ಇತ್ತೀಚಿಗೆ ಬಿಜೆಪಿ ಮುಖಂಡ ಮನೀಶ್ ಶುಕ್ಲಾ ಅವರನ್ನು ಪಶ್ಚಿಮ ಬಂಗಾಳದಲ್ಲಿ ಹತ್ಯೆ ಮಾಡಲಾಗಿತ್ತು. ಇದನ್ನು ಖಂಡಿಸಿ ಇಂದು ನೂರಾರು ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆಯನ್ನು ನಡೆಸಿದ್ದಾರೆ. ಈ ಸಂದರ್ಭದಲ್ಲಿ ನಾಡ ಬಾಂಬ್ ಅನ್ನು ಎಸೆಯಲಾಗಿದೆ.
ಪೊಲೀಸರು ಪ್ರತಿಭಟನೆಯನ್ನು ಹತ್ತಿಕ್ಕಲು ಪ್ರಯತ್ನಿಸಿದ್ದಾರೆ. ಅಶ್ರುವಾಯು ಪ್ರಯೋಗ ಮಾಡಿದ್ದಾರೆ. ಈ ಮೂಲಕ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಬಲ ಪ್ರಯೋಗ ಮಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ಟಿಎಂಸಿ ಗೂಂಡಾಗಳು ಟೆರೇಸ್ ಮೇಲೆ ನಿಂತು ಬಾಂಬ್ ಎಸೆದಿದ್ದಾರೆ ಎಂದು ತೇಜಸ್ವಿ ಸೂರ್ಯ ತಮ್ಮ ಟ್ವಿಟರ್ನಲ್ಲಿ ಆರೋಪಿಸಿದ್ದಾರೆ.
Goonda raj of @MamataOfficial . Peaceful protesters of @BJP4Bengal participating in #NabannaChalo attacked by goondas , police . pic.twitter.com/T07fedd9Ml
— B L Santhosh (@blsanthosh) October 8, 2020
This is what fascism looks like!
Country bombs hurled at our rally by TMC goons from rooftops.
Tear gas and water canons launched against a peaceful march.
The tyrant’s time is coming to an end.#NabannoCholo pic.twitter.com/HngQL7q4K8
— Tejasvi Surya (@Tejasvi_Surya) October 8, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.