ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ 2020-2021ರ ಆರ್ಥಿಕ ಸಾಲಿನ ವಿತ್ತೀಯ ನೀತಿಯನ್ನು ಪ್ರಕಟಿಸಿದೆ. ನಿರೀಕ್ಷೆಯಂತೆ ಬಡ್ಡಿದರಗಳನ್ನು ಬದಲಾವಣೆ ಮಾಡದಿರಲು ನಿರ್ಧರಿಸಿದೆ.
ಕರೋನಾವೈರಸ್ ಕಾರಣದಿಂದಾಗಿ ಕುಂಠಿತವಾಗಿರುವ ಆರ್ಥಿಕ ಚಟುವಟಿಕೆಗಳಿಗೆ ಮತ್ತೆ ಜೀವಂತಿಕೆ ನೀಡುವ ನಿಟ್ಟಿನಲ್ಲಿ ರೆಪೋ ದರ ಮತ್ತು ರಿಸರ್ವ್ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದಿರಲು ನಿರ್ಧರಿಸಲಾಗಿದೆ ಎಂದು ವಿಶ್ಲೇಷಿಸಲಾಗಿದೆ.
ಶುಕ್ರವಾರ ನಡೆದ ಆರ್ಬಿಐ ಹಣಕಾಸು ಸಮಿತಿ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ರೆಪೋ ದರವನ್ನು ಶೇಕಡಾ ನಾಲ್ಕರಲ್ಲಿ ಉಳಿಸಿಕೊಳ್ಳಲಾಗಿದೆ.
ಡಿಸೆಂಬರ್ ತಿಂಗಳಿಂದ ಆರ್ಟಿಜಿಎಸ್ ವ್ಯವಸ್ಥೆಯನ್ನು ದಿನದ 24 ಗಂಟೆಯೂ ಲಭ್ಯವಾಗುವಂತೆ ಮಾಡಲು ನಿರ್ಧರಿಸಲಾಗಿದೆ.
2021ರ ಆರ್ಥಿಕ ಸಾಲಿನಲ್ಲಿ ದೇಶದ ಜಿಡಿಪಿ ಶೇಕಡಾ 9.5ರಷ್ಟು ಇಳಿಕೆಯಾಗುವ ಸಾಧ್ಯತೆಯಿದ್ದು, ಆರ್ಥಿಕ ಸ್ಥಿತಿ ಇಳಿಕೆಯಲ್ಲಿದೆ ಎಂದು ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ್ ದಾಸ್ ಹೇಳಿದ್ದಾರೆ
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.