ನವದೆಹಲಿ: ಸಮಾಜ ಕಲ್ಯಾಣ ಕಾರ್ಯಗಳಿಗೆ ನೀಡಲಾಗುವ ಬಜೆಟ್ನ್ನು ಹೆಚ್ಚಿಸುವ ಸರ್ಕಾರದ ಪ್ರಸ್ತಾಪಕ್ಕೆ ಸಂಸತ್ತಿನಲ್ಲಿ ಅನುಮೋದನೆ ದೊರೆತಿದೆ. ಇದರಿಂದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ನೈರ್ಮಲ್ಯ ಮುಂತಾದ ಯೋಜನೆಗಳಿಗೆ ಹೆಚ್ಚಿನ ಹಣ ದೊರೆಯಲಿದೆ.
ಸಮಾಜ ಕಲ್ಯಾಣ ಕಾರ್ಯಕ್ರಮಗಳಿಗೆ ನರೇಂದ್ರ ಮೋದಿ ಸರ್ಕಾರ ಬಜೆಟ್ ಕಡಿತಗೊಳಿಸಿ, ಬಾಕಿ ಹಣವನ್ನು ಆಯಾ ರಾಜ್ಯಗಳೇ ಪಾವತಿ ಮಾಡಬೇಕು ಎಂದು ಹೇಳಿತ್ತು. ಇದಕ್ಕೆ ಸಚಿವೆ ಮೇನಕಾ ಗಾಂಧಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಹಿನ್ನಲೆಯಲ್ಲಿ ಹೆಚ್ಚಿನ ಹಣವನ್ನು ಮೀಸಲಿಡಲು ಸರ್ಕಾರ ಮುಂದಾಗಿದೆ.
ಕಳೆದ ಬಾರಿ ಮಕ್ಕಳ ಮತ್ತು ಮಹಿಳಾ ಕಲ್ಯಾಣ ಸಚಿವಾಲಯದ ಬಜೆಟನ್ನು 1.62 ಡಾಲರ್ನಷ್ಟು ಕಡಿತ ಮಾಡಲಾಗಿತ್ತು. ಆದರೀಗ ಈ ಸಚಿವಾಲಯ 2.24 ಡಾಲರ್ ಬಿಲಿಯನ್ ಹಣ ಪಡೆಯಲಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ, ನೈರ್ಮಲ್ಯ ಯೋಜನೆಗಳಿಗೆ ಶೇ.40ರಷ್ಟು ಬಜೆಟ್ ಏರಿಸುವ ಯೋಜನೆಯನ್ನು ವಿತ್ತ ಸಚಿವಾಲಯ ಹೊಂದಿದೆ.
ಕುಡಿಯುವ ನೀರು, ನೈರ್ಮಲ್ಯ ವಲಯದ ಬಜೆಟನ್ನು ಶೇ.43ರಷ್ಟು ಏರಿಕೆ ಮಾಡಲು ನಿರ್ಧರಿಸಲಾಗಿದೆ. ಆರೋಗ್ಯ ವಲಯದ ಬಜೆಟನ್ನು ಕಡಿತಗೊಳಿಸಿ ಆಕ್ರೋಶಕ್ಕೆ ಇಡಾಗಿದ್ದ ಸರ್ಕಾರ ಇದೀಗ ಅದರ ಬಜೆಟನ್ನು ಶೇ.೨ರಷ್ಟು ಏರಿಕೆ ಮಾಡಲು ಮುಂದಾಗಿದೆ.
ಸರ್ಕಾರದ ನಿರ್ಧಾರವನ್ನು ಸಾಮಾಜಿಕ ಕಾರ್ಯಕರ್ತರು ಸ್ವಾಗತಿಸಿದ್ದಾರೆ, ಸಾಮಾಜಿಕವಾಗಿ ಹಿಂದುಳಿದಿರುವ ದೇಶವನ್ನು ಅಭಿವೃದ್ಧಿಪಡಿಸಲು ಕೇಂದ್ರದ ಅಧಿಕ ಪ್ರಮಾಣದ ನೆರವು ಅಗತ್ಯವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.