ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿ ಪಾಕಿಸ್ಥಾನದ ‘ಗೂಢಚಾರಿ’ಯನ್ನು ಪೊಲೀಸರು ಬಂಧಿಸಿದ್ದಾರೆ. ಶತ್ರು ದೇಶದ ಪರವಾಗಿ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಕುಲ್ಜೀತ್ ಕುಮಾರ್ ಎಂಬ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಬಂಧಿತನನ್ನು ದುಬೈ ಮೂಲದ ಪಾಕಿಸ್ಥಾನದ ಇಂಟರ್ ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಏಜೆಂಟರು ಹನಿ ಟ್ರ್ಯಾಪ್ಗೆ ಸಿಲುಕಿಸಿದ್ದಾರೆ ಎಂದು ವರದಿಯಾಗಿದೆ. ಈತ ಐಎಸ್ಐ ಏಜೆಂಟ್ ಆದ ದುಬೈ ಮಹಿಳೆಯೊಬ್ಬಳ ಜೊತೆ ಸಾಮಾಜಿಕ ಮಾಧ್ಯಮಗಳ ಮೂಲಕ ಸಂಪರ್ಕ ಹೊಂದಿದ್ದ ಎಂದು ವರದಿಗಳು ಹೇಳಿವೆ. ಹಲವಾರು ಪ್ರಮುಖ ಭದ್ರತಾ ಸ್ಥಳಗಳ ಮಾಹಿತಿಯನ್ನು ಪಡೆಯಲು ಈಕೆ ಕುಮಾರ್ಗೆ ಆಮಿಷ ಒಡ್ಡಿದ್ದಳು ಎಂದು ಹೇಳಲಾಗಿದೆ.
ವರದಿಗಳ ಪ್ರಕಾರ, ಆರೋಪಿ ಹಲವಾರು ಪ್ರಮುಖ ಸ್ಥಳಗಳ ಫೋಟೋಗಳನ್ನು ತೆಗೆದು ಅವುಗಳನ್ನು ಪಾಕಿಸ್ಥಾನದ ಭದ್ರತಾ ಅಧಿಕಾರಿಗಳಿಗೆ 2018 ರಿಂದ ಕಳುಹಿಸುತ್ತಿದ್ದಾನೆ. ಇದಕ್ಕೆ ಪ್ರತಿಯಾಗಿ ಕುಮಾರ್ ಅಪಾರ ಪ್ರಮಾಣದ ಹಣವನ್ನು ಪಡೆಯುತ್ತಿದ್ದ.
ಆತನ ಬಳಿಯಿಂದ ನಾಲ್ಕು ಮೊಬೈಲ್ ಫೋನ್ ಮತ್ತು ಹಲವಾರು ಸಿಮ್ ಕಾರ್ಡ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮೊಬೈಲ್ ಫೋನ್ಗಳು ಹಲವಾರು ಪ್ರಮುಖ ಸ್ಥಳಗಳ ಚಿತ್ರಗಳನ್ನು ಹೊಂದಿದ್ದವು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.