ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ಇಂದು ಮುಂಜಾನೆ ಚಾಮುಂಡಿ ಬೆಟ್ಟದ ತಾಯಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು.
ಈ ಬಾರಿಯ ದಸರಾವನ್ನು ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ. ಸಿ ಎನ್ ಮಂಜುನಾಥ್ ಉದ್ಘಾಟಿಸಿದರು. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೇರಿದಂತೆ ಇನ್ನೂ ಹಲವು ಗಣ್ಯರ ಉಪಸ್ಥಿತಿಯಲ್ಲಿ ಹತ್ತು ದಿನಗಳ ನಾಡಹಬ್ಬಕ್ಕೆ ಚಾಲನೆ ನೀಡಲಾಯಿತು. ಡಾ. ಮಂಜುನಾಥ್ ಅವರು ಮುಖ್ಯಮಂತ್ರಿಗಳ ಜೊತೆಗೆ ಆಗಮಿಸಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಬೆಳ್ಳಿ ರಥದಲ್ಲಿ ಅಲಂಕೃತವಾದ ತಾಯಿ ಚಾಮುಂಡಿಗೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಆರು ಕೊರೋನಾ ಯೋಧರನ್ನು ಸನ್ಮಾನಿಸಲಾಯಿತು.
ಮುಖ್ಯಮಂತ್ರಿ @BSYBJP ರವರು ಇಂದು ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಾಡದೇವತೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು, ಅಗ್ರಪೂಜೆ ಸಲ್ಲಿಸಿ, ವಿಧ್ಯುಕ್ತ ಚಾಲನೆ ನೀಡಿದರು.
ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ|| ಸಿ.ಎನ್.ಮಂಜುನಾಥ್ ದಸರಾ ಉದ್ಘಾಟನೆಯನ್ನು ನೆರವೇರಿಸಿದರು. (1/3) pic.twitter.com/MhrFee2lU7
— CM of Karnataka (@CMofKarnataka) October 17, 2020
ಕೋವಿಡ್-19 ಕಾರಣದಿಂದ ಈ ಬಾರಿ ಸರಳವಾಗಿ ದಸರಾ ಆಚರಣೆ ನಡೆಯುತ್ತಿದೆ. ಹೆಚ್ಚು ಜನರಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಇಲ್ಲ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ದಸರಾ ಕಾರ್ಯಕ್ರಮಗಳನ್ನು ಲೈವ್ ಆಗಿ ನೀಡಲು ಸರ್ಕಾರ ತೀರ್ಮಾನಿಸಿದೆ. ಇದೇ ಸಂದರ್ಭದಲ್ಲಿ ಈ ಹಿಂದೆ ದಸರಾ ಸಮಯದಲ್ಲಿ ಮೈಸೂರು ಪ್ರವಾಸಿ ತಾಣಗಳಿಗೆ ಪ್ರವಾಸಿಗರು ತೆರಳುವುದಕ್ಕೆ ಹೇರಲಾಗಿದ್ದ ನಿರ್ಬಂಧಗಳನ್ನು ಸಿಎಂ ಯಡಿಯೂರಪ್ಪ ತೆರವು ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.