ನವದೆಹಲಿ: ತೆರಿಗೆ ಪಾವತಿದಾರರಿಗೆ ಹೆಚ್ಚಿನ ನಿರಾಳತೆ ನೀಡುವ ಪ್ರಯತ್ನವಾಗಿ ವಿವಾದ್ ಸೆ ವಿಶ್ವಾಸ್ ಯೋಜನೆಗೆ ಪಾವತಿ ದಿನಾಂಕವನ್ನು ಸರ್ಕಾರ ವಿಸ್ತರಿಸಿದೆ.
ವಿವಾದ್ ಸೆ ವಿಶ್ವಾಸ್ ಯೋಜನೆಯಡಿ ವಿವಾದಗಳನ್ನು ಬಗೆಹರಿಸಲು ಬಯಸುವ ತೆರಿಗೆದಾರರಿಗೆ ಹೆಚ್ಚಿನ ಪರಿಹಾರವನ್ನು ನೀಡುವ ಸಲುವಾಗಿ, ಹೆಚ್ಚುವರಿ ಮೊತ್ತವಿಲ್ಲದೆ ಪಾವತಿ ಮಾಡುವ ದಿನಾಂಕವನ್ನು ಸರ್ಕಾರವು ಡಿಸೆಂಬರ್ 31, 2020 ರಿಂದ ಮಾರ್ಚ್ 31, 2021 ರವರೆಗೆ ವಿಸ್ತರಿಸಿದೆ.
ವಿವಾದ್ ಸೆ ವಿಶ್ವಾಸ್ ಯೋಜನೆಯಲ್ಲಿ ಆದಾಯ ತೆರಿಗೆ ಇಲಾಖೆ ಈವರೆಗೆ ಮಾಡಿರುವ ಪ್ರಗತಿಯನ್ನು ಹಣಕಾಸು ಕಾರ್ಯದರ್ಶಿ ಅಜಯ್ ಭೂಷಣ್ ಪಾಂಡೆ ಅವರು, ಸಿಬಿಡಿಟಿ ಅಧ್ಯಕ್ಷರು ಮತ್ತು ಮಂಡಳಿಯ ಸದಸ್ಯರೊಂದಿಗೆ ದೇಶಾದ್ಯಂತದ ಎಲ್ಲಾ ಆದಾಯ ತೆರಿಗೆ ಮುಖ್ಯ ಆಯುಕ್ತರೊಂದಿಗೆ ಉನ್ನತ ಮಟ್ಟದ ವಿಡಿಯೋ ಕಾನ್ಫರೆನ್ಸಿಂಗ್ ಸಭೆ ನಡೆಸಿದ ಸಂದರ್ಭ ಪರಿಶೀಲಿಸಿದ್ದಾರೆ.
“ನಾವು ವಿವಾದ್ ಸೆ ವಿಶ್ವಾಸ್ ಯೋಜನೆಯನ್ನು ಹೆಚ್ಚಿನ ಮನವೊಲಿಸುವಿಕೆ ಮತ್ತು ಪರಿಶ್ರಮದಿಂದ ಮುನ್ನಡೆಸಬೇಕಾಗಿದೆ ಮತ್ತು ಅಗತ್ಯವಿರುವ ಕ್ರಮಗಳೊಂದಿಗೆ ಅನುಕೂಲಕರವಾಗಿ ತೆರಿಗೆದಾರರನ್ನು ತಲುಪಬೇಕು” ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.