ಬೆಂಗಳೂರು: ಸಂಭ್ರಮದ ಕನ್ನಡ ರಾಜ್ಯೋತ್ಸವಕ್ಕೆ ರಾಜ್ಯದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಶುಭಾಶಯಗಳನ್ನು ತಿಳಿಸಿದ್ದು, ತಮ್ಮ ನಿವಾಸ ಕಾವೇರಿಯಲ್ಲಿ ಕನ್ನಡಮ್ಮ ಭುವನೇಶ್ವರಿಯ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ್ದಾರೆ.
ಬಳಿಕ ಮಾತನಾಡಿದ ಅವರು, ಕನ್ನಡವನ್ನು ಹೆಚ್ಚು ಬಳಕೆ ಮಾಡಿದಾಗ ಮಾತ್ರ ಕನ್ನಡ ಬೆಳೆಯುತ್ತದೆ. ನಮ್ಮ ದೈನಂದಿನ ವ್ಯವಹಾರದಲ್ಲಿ ಕನ್ನಡ ಬಳಸುವುದು, ಬರೆಯುವುದು ಮಾಡಿದಲ್ಲಿ ಕನ್ನಡ ಮತ್ತಷ್ಟು ಪ್ರಖರವಾಗುತ್ತದೆ. ಅದರಂತೆ ಕನ್ನಡಿಗರು ತಮ್ಮ ಮನೆಗಳಲ್ಲಿ ಮಕ್ಕಳ ಜೊತೆಗೂ ನಾಡ ಭಾಷೆ ಕನ್ನಡದಲ್ಲಿ ಮಾತನಾಡುವುದು ಮಾಡಿದಲ್ಲಿ ಕನ್ನಡ ಜೀವಂತವಾಗಿರುತ್ತದೆ ಎಂದು ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಅವರು ರಾಷ್ಟ್ರಕವಿ ಕುವೆಂಪು ಅವರ ಕನ್ನಡಕ್ಕಾಗಿ ಕಿರು ಬೆರಳೆತ್ತಿದರೆ ಸಾಕು, ಅದೇ ಗೋವರ್ಧನ ಗಿರಿಯಾಗುತ್ತದೆ ಎಂಬ ಉಕ್ತಿಯನ್ನು ನೆನಪಿಸಿಕೊಂಡಿದ್ದಾರೆ. ಜೊತೆಗೆ ಕನ್ನಡ ಭಾಷೆ ಬಳಕೆ ಮಾಡಿದಲ್ಲಿ ಮಾತ್ರವೇ ಬೆಳೆಯಲು ಸಾಧ್ಯ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇದೇ ಸಂದರ್ಭದಲ್ಲಿ ಕನ್ನಡದ ಹಬ್ಬ ಕನ್ನಡ ರಾಜ್ಯೋತ್ಸವಕ್ಕೆ ಶುಭಾಶಯಗಳನ್ನು ತಿಳಿಸಿದ ಪ್ರಧಾನಿ ಮೋದಿ ಅವರಿಗೂ ಯಡಿಯೂರಪ್ಪ ಧನ್ಯವಾದ ಸಮರ್ಪಿಸಿದ್ದಾರೆ.
ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಇಂದು ನನ್ನ ಅಧಿಕೃತ ನಿವಾಸ ಕಾವೇರಿಯಲ್ಲಿ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. #ಕನ್ನಡರಾಜ್ಯೋತ್ಸವ2020 pic.twitter.com/5RsyXk5mpw
— B.S. Yediyurappa (@BSYBJP) November 1, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.