ನವದೆಹಲಿ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ‘ಲವ್ ಜಿಹಾದ್’ ವಿರುದ್ಧ ಗುಡುಗಿದ್ದಾರೆ. ಇಂತಹ ಪ್ರಕರಣಗಳ ವಿರುದ್ಧ ಕಠಿಣ ಕಾನೂನು ಜಾರಿಗೊಳಿಸುವುದಾಗಿ ಅವರು ತಿಳಿಸಿದ್ದಾರೆ.
ತಮ್ಮ ಗುರುತನ್ನು ಮರೆ ಮಾಚಿ ಹಿಂದೂ ಯುವತಿಯರಿಗೆ ಮೋಸ ಮಾಡುವವರು ಮತ್ತು ಅವರ ಘನತೆಗೆ ಕುತ್ತು ತರಲು ಪ್ರಯತ್ನಿಸುತ್ತಿರುವವರು ತಕ್ಷಣ ತಮ್ಮ ಕೃತ್ಯವನ್ನು ನಿಲ್ಲಿಸಬೇಕು, ಇಲ್ಲವಾದರೆ ಅವರ ಗತಿ ‘ರಾಮನಾಮ ಸತ್ಯ’ ಆಗುತ್ತದೆ ಎಂದಿದ್ದಾರೆ.
ಮದುವೆಯಾಗುವ ಸಲುವಾಗಿ ಮತಾಂತರವಾಗುವುದನ್ನು ಒಪ್ಪಲಾಗುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ಯೋಗಿ ಆದಿತ್ಯನಾಥ್ ಈ ಎಚ್ಚರಿಕೆಯನ್ನು ರವಾನಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.