ಬೆಂಗಳೂರು: ಕೊರೋನಾ ಅವಧಿಯಲ್ಲಿ ಕಳೆದ ಮಾರ್ಚ್ ತಿಂಗಳಿನಿಂದ ಬಾಗಿಲು ಹಾಕಿರುವ ಶಾಲಾ, ಪದವಿಪೂರ್ವ ತರಗತಿಗಳ ಆರಂಭಕ್ಕೆ ಸಂಬಂಧಿಸಿದಂತೆ ನ. 6 ರಂದು ರಾಜ್ಯ ಸರ್ಕಾರ ಅಂತಿಮ ತೀರ್ಮಾನಗಳನ್ನು ತೆಗೆದುಕೊಳ್ಳುವ ಮುನ್ಸೂಚನೆ ನೀಡಿದೆ.
ಶಾಲೆಗಳು, ಕಾಲೇಜುಗಳ ಆರಂಭಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಮುಂದಿನ 4, 5 ಮತ್ತು 6 ರಂದು ಶಿಕ್ಷಣ ತಜ್ಞರು, ಅಧಿಕಾರಿಗಳು, ಜನಪ್ರತಿನಿಧಿಗಳ ಜೊತೆಗೆ ಮಾತುಕತೆ ನಡೆಸಿ ತೀರ್ಮಾನ ಕೈಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಸಭೆಯಲ್ಲಿ ಭಾಗವಹಿಸದ ಅಧಿಕಾರಿಗಳ ಅಭಿಪ್ರಾಯಗಳಿಗೆ ಪೂರಕವಾಗಿ ಶಾಲಾರಂಭಕ್ಕೆ ಸಂಬಂಧಿಸಿದಂತೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ. ನ. 6 ರಂದು ಕರ್ನಾಟಕದಲ್ಲಿ ಶಾಲಾರಂಭ ಯಾವಾಗ, ಯಾವೆಲ್ಲ ಕ್ರಮಗಳನ್ನು ಅನುಸರಿಸಿ ಶಾಲಾರಂಭ ಮಾಡಲಾಗುವುದು ಎಂಬೆಲ್ಲಾ ವಿಚಾರಗಳನ್ನು ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ.
ಇನ್ನು ಕೊರೋನಾ ಸಂಕಷ್ಟದ ರಜೆಯ ಬಳಿಕ ಇದೀಗ ಅಧ್ಯಾಪಕ ವೃಂದ ಮತ್ತೆ ಶಾಲೆಗೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ನಿರಂತರ ಕಲಿಕೆಗೆ ಸಂಬಂಧಿಸಿದಂತೆ ಯಾವ ರೀತಿಯ ಕಾರ್ಯಕ್ರಮಗಳನ್ನು ಅಳವಡಿಸಿಕೊಳ್ಳಬಹುದು, ಶೈಕ್ಷಣಿಕ ಚಟುವಟಿಕೆ ನಡೆಸಲು ತೆಗೆದುಕೊಳ್ಳಬಹುದಾದ ಪೂರಕ ಕ್ರಮಗಳ ಬಗೆಗೂ ರೂಪುರೇಶೆ ಸಿದ್ಧಪಡಿಸಲಾಗುವುದು ಎಂದು ಸಂಬಂಧಿಸಿದ ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.