ಬೆಂಗಳೂರು: ಸರ್ಕಾರಿ ನೌಕರಿಯಲ್ಲಿರುವ ಜನರು ತಮ್ಮ ಕಛೇರಿಗಳಲ್ಲಿ, ಕೆಲಸದ ಅವಧಿಯಲ್ಲಿ ಕಡ್ಡಾಯವಾಗಿ ಸರ್ಕಾರ ನೀಡಿದ ಗುರುತಿನ ಚೀಟಿಯನ್ನು ಧರಿಸಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿದೆ.
ಈ ಸಂಬಂಧ ಆದೇಶ ಹೊರಡಿಸಿರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಕೇವಲ ತಾವು ಕಾರ್ಯ ನಿರ್ವಹಿಸುವ ಇಲಾಖೆ ನೀಡಿದ ಗುರುತಿನ ಚೀಟಿಯನ್ನು ಧರಿಸುವುದು ಮಾತ್ರವಲ್ಲದೆ, ಕಛೇರಿಯಲ್ಲಿ ತಾವು ಕುಳಿತುಕೊಳ್ಳುವ ಸ್ಥಳದ ಮೇಜಿನ ಮೇಲೆಯೂ ತಮ್ಮ ಹೆಸರು, ಹುದ್ದೆ ನಮೂದಾಗಿರುವ ನಾಮಫಲಕಗಳನ್ನು ಅಳವಡಿಸಬೇಕು ಎಂದು ತಿಳಿಸಿದೆ.
ಕೆಲಸದಲ್ಲಿ ಪಾರದರ್ಶಕತೆ ತರಲು, ಸಾರ್ವಜನಿಕರಿಗೆ ಅಧಿಕಾರಿಗಳನ್ನು ನೇರವಾಗಿ ಭೇಟಿಯಾಗುವುದಕ್ಕೆ ಪೂರಕವಾಗುವಂತೆ ಈ ಕ್ರಮವನ್ನು ಜಾರಿಗೆ ತರಲಾಗಿದೆ. ಈ ವ್ಯವಸ್ಥೆ ಬ್ಯಾಂಕ್, ಅಂಚೆ ಕಛೇರಿಗಳಲ್ಲಿ ಈಗಾಗಲೇ ಜಾರಿಯಲ್ಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ಈ ಆದೇಶವನ್ನು ಸರಿಯಾದ ರೀತಿಯಲ್ಲಿ ಪಾಲನೆ ಮಾಡುವಂತೆ ಎಲ್ಲಾ ಇಲಾಖೆಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು ತಮ್ಮ ಕೆಳಗಿನ ಎಲ್ಲಾ ಸಿಬ್ಬಂದಿಗಳಿಗೂ ಕಡ್ಡಾಯವಾಗಿ ಸೂಚಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.