ಬೆಂಗಳೂರು: ಕೊರೋನಾ ಸಂಕಷ್ಟದ ನಡುವೆ ರಾಜ್ಯದಲ್ಲಿ 2020-21 ನೇ ಸಾಲಿನ ಪದವಿ, ಎಂಜಿನಿಯರಿಂಗ್, ಡಿಪ್ಲೊಮಾ ತರಗತಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಕೊರೋನಾ ಸೋಂಕು ವ್ಯಾಪಿಸದ ರೀತಿಯಲ್ಲಿ ಪೂರಕ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವಂತೆ ಈ ಮಾರ್ಗಸೂಚಿಯಲ್ಲಿ ತಿಳಿಸಿದೆ. ಈ ಬಾರಿ ರಾಜ್ಯದಲ್ಲಿನ ಎಲ್ಲಾ ಕಾಲೇಜುಗಳಲ್ಲಿ ಈ ಮಾರ್ಗಸೂಚಿಯಲ್ಲಿ ತಿಳಿಸಿರುವ ಪ್ರಮಾಣಿತ ಕ್ರಮಗಳನ್ನು ಕಡ್ಡಾಯವಾಗಿ ಅನುಸರಿಸತಕ್ಕದ್ದು ಎಂದು ಯುಜಿಸಿ ತಿಳಿಸಿದೆ.
ಸ್ನಾತಕೋತ್ತರ ಮತ್ತು ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ನ. 17 ರಿಂದ ತೊಡಗಿದಂತೆ ಭೌತಿಕ ತರಗತಿಗಳು ಆರಂಭವಾಗಲಿವೆ. ತರಗತಿಗೆ ಹಾಜರಾಗುವ ವಿದ್ಯಾರ್ಥಿಗಳು ಪೋಷಕರ ಸಹಿ ಇರುವ ಹೆತ್ತವರ ಒಪ್ಪಿಗೆ ಪತ್ರ ತರುವಂತೆ ಸೂಚಿಸಲಾಗಿದೆ. ತರಗತಿಗಳನ್ನು ಆರೋಗ್ಯ ಇಲಾಖೆಯಿಂದ ಹೊರಡಿಸಲಾದ ಮತ್ತು ಪ್ರಸ್ತುತ ಅನುಸರಿಸಿಕೊಂಡು ಬರುತ್ತಿರುವ ಕೊರೋನಾ ನಿಯಂತ್ರಣ ನಿಯಮಗಳನ್ನು ಅನುಸರಿಸಿಕೊಂಡೇ ನಡೆಸಬೇಕು. ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಪೂರಕ ಕ್ರಮ ಕೈಗೊಳ್ಳಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಿದೆ. ಭೋದನಾ, ಪ್ರಯೋಗಾಲಯ ಮತ್ತು ಪ್ರಾಜೆಕ್ಟ್ ತರಗತಿಗಳನ್ನು, ಅವಶ್ಯವಿದ್ದಲ್ಲಿ ಶಿಫ್ಟ್ ಸಿಸ್ಟಂ (Shift system) ಮೇರೆಗೆ ನಡೆಸಲು ಸೂಚಿಸಲಾಗಿದೆ.
ಭೌತಿಕವಾಗಿ ತರಗತಿಗಳಿಗೆ ಹಾಜರಾಗದ ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿ ನಡೆಸುವುದು, ಕಾಲೇಜು ಹಂತದಲ್ಲೇ ವೇಳಾಪಟ್ಟಿ ಸಿದ್ಧಪಡಿಸುವುದು, ವಿದ್ಯಾರ್ಥಿಗಳ ಪಠ್ಯಕ್ರಮದ ಅನುಮಾನ ಪರಿಹರಿಸಲು ಪೂರಕವಾಗುವಂತೆ ಕಾಂಟ್ಯಾಕ್ಟ್ ಕ್ಲಾಸ್ ನಡೆಸುವಂತೆ ಸೂಚಿಸಲಾಗಿದೆ. ಅಧ್ಯಾಪಕರು ತಮ್ಮ ತರಗತಿಗಳ ವಿದ್ಯಾರ್ಥಿಗಳಿಗೆ ಪಠ್ಯಕ್ರಮದ ಕುರಿತು ಮುಂದಿನ ಕನಿಷ್ಟ ಒಂದು ತಿಂಗಳ ಅಧ್ಯಯನ ಸಾಮಾಗ್ರಿಗಳನ್ನು ತಯಾರಿಸಿ ವಿದ್ಯಾರ್ಥಿಗಳಿಗೆ ಟೆಲಿಗ್ರಾಂ/ ಇಮೇಲ್/ ವಾಟ್ಸಾಪ್ ಮೂಲಕ ಕಡ್ಡಾಯವಾಗಿ ನೀಡುವುದು ಮತ್ತು ಕಾಲೇಜಿನ ವೆಬ್ ಸೈಟ್ ನಲ್ಲಿ ಕಡ್ಡಾಯವಾಗಿ ಅಪ್ಲೋಡ್ ಮಾಡುವಂತೆಯೂ ಮಾರ್ಗಸೂಚಿ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.