ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮಹಾಘಟಬಂಧನ್ ಮಹಾ ಸೋಲನ್ನು ಅನುಭವಿಸಿದೆ. ಈ ಸೋಲಿನ ಬಳಿಕ ಎಂದಿನಂತೆ ರಾಹುಲ್ ಗಾಂಧಿಯವರು ಪ್ರವಾಸ ಹೊರಟಿದ್ದಾರೆ.
ಪ್ರತಿ ಬಾರಿ ಚುನಾವಣಾ ಸೋಲಿನ ಬಳಿಕ ವಿದೇಶಕ್ಕೆ ತೆರಳುತ್ತಿದ್ದ ರಾಹುಲ್ ಗಾಂಧಿ ಈ ಬಾರಿ ಮಾತ್ರ ಸ್ವದೇಶಿ ಪ್ರವಾಸ ಮಾಡುತ್ತಿದ್ದಾರೆ. ಬುಧವಾರ ಅವರು ರಾಜಾಸ್ಥಾನದ ಜೈಸಲ್ಮೇರ್ ತಲುಪಿದ್ದಾರೆ. ಅಲ್ಲಿನ ಸೂರ್ಯಗಢ ಅರಮನೆಯೊಂದರಲ್ಲಿ ಅವರು ಎರಡು ದಿನವನ್ನು ಕಳೆಯಲಿದ್ದಾರೆ ಎಂದು ಹೇಳಲಾಗಿದೆ. ಶುಕ್ರವಾರ ಅವರು ದೆಹಲಿಗೆ ವಾಪಸ್ ಆಗುವ ನಿರೀಕ್ಷೆಯಿದೆ.
ಈಗಾಗಲೇ ಜೈಸಲ್ಮೇರ್ ಆಡಳಿತ ರಾಹುಲ್ ಗಾಂಧಿಯವರ ವಾಸ್ತವ್ಯಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಎಂಟು ಹತ್ತು ಮಂದಿಗೆ ವಿಐಪಿ ವ್ಯವಸ್ಥೆಯನ್ನು ಮಾಡಿಕೊಟ್ಟಿದೆ. ಅಲ್ಲದೆ ಅವರನ್ನು ಸ್ವಾಗತಿಸಲು ಆಗಮಿಸದಂತೆ ಕಾರ್ಯಕರ್ತರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಬಿಹಾರ ಚುನಾವಣೆಯಲ್ಲಿ ಕೇವಲ 19 ಸ್ಥಾನಗಳನ್ನು ಪಡೆದುಕೊಂಡಿದೆ. ಒಟ್ಟು 20 ಸ್ಥಾನಗಳಲ್ಲಿ ಅದು ಸ್ಪರ್ಧೆ ನಡೆಸಿತ್ತು. ಮಹಾಘಟಬಂಧನ್ ಒಟ್ಟಾಗಿ 110 ಸ್ಥಾನಗಳನ್ನು ಗೆಲ್ಲುವಲ್ಲಿ ಮಾತ್ರ ಶಕ್ತವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.